Advertisement

ಐಪಿಎಲ್‌ ಬೆಟ್ಟಿಂಗ್‌: ದಿಲ್ಲಿಯಲ್ಲಿ ಮೂವರ ಬಂಧನ

07:40 AM Apr 18, 2018 | |

ಹೊಸದಿಲ್ಲಿ: ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌)ಆರಂಭವಾಗುತ್ತಿದ್ದಂತೆ ಬೆಟ್ಟಿಂಗ್‌ ಕೂಡ ತಲೆ ಎತ್ತಿದೆ. ಹೊಸದಿಲ್ಲಿಯಲ್ಲಿ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಸಿದ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 

Advertisement

ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡಗಳ ನಡುವಿನ ಪಂದ್ಯದ ವೇಳೆ ಅವರು ಬೆಟ್ಟಿಂಗ್‌ ನಡೆಸುತ್ತಿದ್ದರು. ಈ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ. 11 ಮೊಬೈಲ್‌ ಫೋನ್‌, ಒಂದು ಲ್ಯಾಪ್‌ಟಾಪ್‌, 1 ಟೀವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು ಹಲವರನ್ನು ಬಂಧಿಸುವ ಸಾಧ್ಯತೆ ಇಂದು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next