Advertisement

ಪೊಲೀಸರಿಗೆ ನಾಗರಿಕರ ನೆರವು ಅಗತ್ಯ

06:03 PM Oct 22, 2020 | Suhan S |

ಚಿಕ್ಕಮಗಳೂರು: ನಿಷ್ಠೆಯಿಂದ ಕರ್ತವ್ಯನಿರ್ವಹಿಸುವ ಸಮಯದಲ್ಲಿ ಪ್ರಾಣತ್ಯಾಗ ಮಾಡಿರುವ ವೀರ ಪೇದೆಗಳನ್ನು ನೆನೆಯುವ ಸದುದ್ದೇಶದಿಂದ ದೇಶದಾದ್ಯಂತ ಪ್ರತಿ ವರ್ಷ ಅ.21ರಂದು ಪೊಲೀಸ್‌ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನಾಯಾ ಧೀಶರಾದ ಶುಭಾ ಗೌಡರ್‌ ತಿಳಿಸಿದರು.

Advertisement

ಬುಧವಾರ ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್‌ ಸಶಸ್ತ್ರ ಮೀಸಲು ಪಡೆಯ ಹುತಾತ್ಮರ ಸ್ಮಾರಕದ ಆವರಣದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂ ದಆಯೋಜಿಸಲಾಗಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾಜದಲ್ಲಿ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ಹಗಲು-ಇರುಳನ್ನು ಲೆಕ್ಕಿಸದೆ ಲಕ್ಷಾಂತರ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸರೊಂದಿಗೆ ಸಹಾಯ ಹಸ್ತ ನೀಡಿದಾಗ ಮಾತ್ರ ಶಾಂತಿಯುತಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಮಾಜದಲ್ಲಿ ಶಿಸ್ತು ಪಾಲನೆಯಾಗುತ್ತಿರುವ ಇಲಾಖೆ ಎಂದರೆ ಅದು ಪೊಲೀಸ್‌ ಇಲಾಖೆ.ಪೊಲೀಸರು ನಿಷ್ಠೆಯಿಂದ ನಿಸ್ವಾರ್ಥ ಸೇವೆನೀಡುತ್ತಿದ್ದಾರೆ. ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಪ್ರಾಣತ್ಯಾಗಮಾಡಿರುವ ವೀರ ಪೊಲೀಸರನ್ನು ನೆನೆಯುವಉದ್ದೇಶದಿಂದ ಪತ್ರಿವರ್ಷ ದೇಶಾದ್ಯಂತ ಪೊಲೀಸ್‌ ಹುತಾತ್ಮರ ದಿನವನ್ನು ಆಚರಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜವಾಬ್ದಾರಿಮರೆತು ಸಮಾಜದಲ್ಲಿ ಅಶಾಂತಿ ಉಂಟು ಮಾಡಿಆಂತರಿಕ ಗಲಭೆಗಳು ಸೃಷ್ಠಿಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಶಾಂತಿ ಕಾಪಾಡುವ ವೇಳೆಯಲ್ಲಿ ಕಾರ್ಯನಿರ್ವಹಿಸುವ ಎಷ್ಟೋ ಮಂದಿ

Advertisement

ಪೊಲೀಸರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ಜನರನ್ನು ಸುರಕ್ಷಿತವಾಗಿರಲು ಪೊಲೀಸರಿಂದ ಮಾತ್ರ ಸಾಧ್ಯ. ಅಂತಹ ಪೊಲೀಸರು ಒಂದು ದಿನ ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಸಮಾಜದಲ್ಲಿ ಅಶಾಂತಿ ಉಂಟಾಗಿ ನೆಮ್ಮದಿಯ ಬದುಕು ನಡೆಸುವುದನ್ನು ಊಹಿಸಲು ಸಾಧ್ಯವಿಲ್ಲ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ಮೊದಲು ನಮ್ಮ ಹಳ್ಳಿ, ಜಿಲ್ಲೆ, ರಾಜ್ಯ, ದೇಶವನ್ನು ಕುಕೃತ್ಯದಿಂದ ದೂರವಿರಿಸಿದಾಗ ಸದೃಢ ಸಮಾಜ ನಿರ್ಮಿಸಬುಹುದಾಗಿದ್ದು, ಆ ಮೂಲಕ ಬಲಿಷ್ಠ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಹುತಾತ್ಮರಾದ 264 ಪೊಲೀಸರನ್ನುಹೆಚ್ಚುವರಿ ಪೊಲೀಸ್‌ ವರಿಷ್ಠಾ ಧಿಕಾರಿ ಶೃತಿ ಅವರು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಸಾಮಾಜಿಕ ವಲಯದ ಅರಣ್ಯಾಧಿಕಾರಿ ಸುನಿಲ್‌ ಪವಾರ್‌, ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ, ತಹಶೀಲ್ದಾರ್‌ ಡಾ| ಕಾಂತರಾಜ್‌, ಕೆ.ಎಸ್‌. ಆರ್‌.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್‌ ಹಾಗೂ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next