ಬೆಂಗಳೂರು: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಸಂಜೆ ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯನ್ನಾಗಿ ವರ್ಗ ಮಾಡಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿದ್ದ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ : ಉನ್ನತ ಪೊಲೀಸ್ ಅಧಿಕಾರಿಗಳ ವರ್ಗಾವಣೆ: ಕೊನೆಗೂ ಕಮಲ್ ಪಂತ್ ಎತ್ತಂಗಡಿ
ಆಂಧ್ರದ ಗುಂಟೂರು ಮೂಲದ ರೆಡ್ಡಿ ಅವರು ಬಿ.ಟೆಕ್ ಪದವೀಧರರಾಗಿದ್ದು, 1991ರಲ್ಲಿ ಐಪಿಎಸ್ ಗೆ ಸೇರಿದ್ದು, ಕರ್ನಾಟಕ ಕೆಡರ್‌ನ ಅಧಿಕಾರಿಯಾಗಿ ವಿವಿಧ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.