Advertisement

ಉಡುಪಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ!

03:50 PM Apr 29, 2022 | Team Udayavani |

ಉಡುಪಿ: ನಗರದ ಆದಿಉಡುಪಿ ಪ್ರೌಢ ಶಾಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ತನ್ನ ರೈಫಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಸಿನಿಮೀಯ ರೀತಿಯಲ್ಲಿ ಮನೆ ದರೋಡೆಕೋರರ ಬಂಧನ

ರಾಜೇಶ್ ಅವರು ಆದಿಉಡುಪಿ ಶಾಲೆಯಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕಾವಲು ಕರ್ತವ್ಯದಲ್ಲಿದ್ದರು. ರಾತ್ರಿ ವೇಳೆಯಲ್ಲಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next