ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಮಾಡುತ್ತಿದೆ. ಮತ್ತೊಂದೆಡೆ ಕೋವಿಡ್ ರಣಕೇಕೆ ಹಾಡುತ್ತಿದೆ.
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಜನರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಅವರು ಜಿಲ್ಲೆಯಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣವಾಗಿ ಅನುಷ್ಠಾನಗೊಳಿಸುವ ಜೊತೆಗೆ ಜನರಲ್ಲಿ ಸೋಂಕಿನ ಕುರಿತು ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸುತ್ತಿದ್ದಾರೆ.
ಇದನ್ನೂ ಓದಿ: ಮಸ್ಕಿಯಲ್ಲಿ ‘ಪ್ರತಾಪ’ ತೋರಿದ ತುರುವಿನಹಾಳ: ಕಮಲ ಪಕ್ಷದ ಆಪರೇಶನ್ ಗೆ ಹಿನ್ನಡೆ?
ಆದರೆ ಜನರ ನಿರ್ಲಕ್ಷದಿಂದ ಜಿಲ್ಲೆಯಲ್ಲಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆಗಾಗಿ ಮೀಸಲಿಟ್ಟಿರುವ ಹಾಸಿಗೆಗಳು ಬಹುತೇಕ ಭರ್ತಿಯಾಗಿದ್ದು ,ಇದೇ ರೀತಿ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಜಿಲ್ಲೆಯಲ್ಲಿ ಹಾಸಿಗೆಗಳ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಮನೆಮಾಡಿದೆ.
ಜಿಲ್ಲೆಯ ಮಂಚೇನಹಳ್ಳಿ ಠಾಣೆಯಲ್ಲಿ ಮುಖ್ಯ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಕೇಶ್ ಯಾದವ್ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.