Advertisement

ಪೊಲಿಪು : ಗಾಂಜಾ ಸೇವಿಸಿದ್ದ ಯುವಕ ಪೊಲೀಸ್‌ ವಶಕ್ಕೆ

05:01 PM Aug 25, 2022 | Team Udayavani |

ಕಾಪು: ಉಳಿಯಾರಗೋಳಿ ಗ್ರಾಮದ ಪೊಲಿಪು ಜಂಕ್ಷನ್‌ ಬಳಿ ಮಾದಕ ನಶೆಯಲ್ಲಿ ತಿರುಗಾಡುತ್ತಿದ್ದ ಶಿರ್ವ ತೋಪನಂಗಡಿ ನಿವಾಸಿ ಮಹಮ್ಮದ್‌ ಅಫ್ರಜ್‌ (19) ಎಂಬಾತನನ್ನು ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಕಾಪು ಎಸ್ಸೈ  ಶ್ರೀಶೈಲ ಮುರಗೋಡ ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಅನುಮಾನಾಸ್ಪದ ರೀತಿಯಲ್ಲಿ ಮಾದಕ ಸೇವನೆಯ ನಶೆಯಲ್ಲಿದ್ದ ಮಹಮ್ಮದ್‌ ಅಫ್ರಜ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದಿತ್ತು.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಯ ಬಗ್ಗೆ ಪ್ರೊಫೆಸರ್‌ ಅಂಡ್‌ ಹೆಡ್‌ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್‌ ವಿಭಾಗದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ಈ ವೇಳೆ ವೈದ್ಯರು ಆತ ಗಾಂಜಾ ಸೇವಿಸಿರುವ ಬಗ್ಗೆ ದೃಢ ಪಡಿಸಿದ್ದರು. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next