ಮಂಗಳೂರು: ಲವ್ ಜಿಹಾದ್ ಪ್ರಕರಣಗಳನ್ನು ಖಂಡಿಸಿ, ಲವ್ ಜಿಹಾದ್ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಇಂದು ಅಪರಾಹ್ನ ನಿಗದಿಯಾಗಿದ್ದ ಪ್ರತಿಭಟನಾ ಸಭೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಪೊಲೀಸರು ಒತ್ತಡಕ್ಕೆ ಮಣಿದು ಅನುಮತಿ ನಿರಾಕರಿಸಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಕಿತ್ತು ಕೊಂಡಿದ್ದಾರೆ. ಲವ್ ಜಿಹಾದ್ ಗೆ ಮುಗ್ದ ಹಿಂದೂ ಹೆಣ್ಮಕ್ಕಳು ಬಲಿಯಾಗುತ್ತಿದ್ದು ಹಿಂದೂ ಸಮಾಜ ಆತಂಕಕ್ಕೊಳಗಾಗಿದೆ. ಮೊನ್ನೆಯಷ್ಟೆ ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲು ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ ಪೊಲೀಸರು ಸಾರಾ ಸಗಟಾಗಿ ನಿರಾಕರಿಸಿದ್ದಾರೆ ಎಂದು ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಶ್ರೀಲಕ್ಷ್ಮೀ ಮಠದ ಮೂಲೆ, ಸುಕನ್ಯಾ ರಾವ್ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯವಾದಿ ಹರೀಶ್ ಕುಮಾರ್ ಅವರು ಮಾತನಾಡಿ, ಈಗ ಉಂಟಾಗಿರುವ ಲವ್ ಜಿಹಾದ್ ಸಮಸ್ಯೆ ಪರಿಹಾರಕ್ಕೆ ಮುಂದಾಗಿರಬೇಕೇ ಹೊರತು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಬಾರದು. ಸಾರ್ವಜನಿಕ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸುವಾಗ ಪೊಲೀಸರು ಅಡ್ಡಿ ಪಡಿಸಬಾರದು. ಸಂವಿಧಾನ ನೀಡಿರುವ ಹಕ್ಕನ್ನು ಪೊಲೀಸರು ಕಸಿದುಕೊಂಡಿದ್ದಾರೆ ಎಂದು ಹೇಳಿದರು.
ಪ್ರಮುಖರಾದ ರೂಪಾ ಡಿ.ಬಂಗೇರ, ಪುನೀತ್ ಅತ್ತಾವರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: Heavy Rain: ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ