ದಾವಣಗೆರೆ: ದಾವಣಗೆರೆಯಲ್ಲಿ ಎಲ್ಲಿಯೂ ಗ್ಯಾಂಗ್ ರೇ*ಪ್ ಘಟನೆ ನಡೆದಿಲ್ಲ. ಈ ಬಗ್ಗೆ ಹರಿದಾಡುತ್ತಿರುವುದು ಅಪ್ಪಟ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ಇಲಾಖೆ (Police department) ಸ್ಪಷ್ಟಪಡಿಸಿದೆ.
ದಾವಣಗೆರೆಯ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸೆ.1 ರ ಸಂಜೆ 7ರ ಸಮಯದಲ್ಲಿ ನಿಟುವಳ್ಳಿ ಪ್ರದೇಶದಲ್ಲಿ ಗ್ಯಾಂಗ್ ರೇಪ್ ಆಗಿದೆ. ಹಾಗಾಗಿ ಯುವತಿಯರು ಅನಗತ್ಯವಾಗಿ ಓಡಾಡಬೇಡಿ. ವಿಶೇಷವಾಗಿ ಒಬ್ಬಂಟಿಗರಾಗಿ ಓಡಾಡಬೇಡಿ… ಎಂಬುದಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಸಂದೇಶ ಹರಿದಾಡುತ್ತಿದೆ ಎಂಬ ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸ್ ಇಲಾಖೆ ಎಲ್ಲೆಡೆ ಪರಿಶೀಲನೆ ನಡೆಸಿದಾಗ ಸುಳ್ಳು ಸುದ್ದಿ ಎಂಬುದು ಖಚಿತವಾಯಿತು. ಪೋಸ್ಟ್ ಮಾಡಿದ ವಿದ್ಯಾರ್ಥಿನಿ ಮತ್ತು ಪೋಷಕರಿಗೆ, ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುವುದು ತಪ್ಪಾಗುತ್ತದೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಬಳಸುವಾಗ ಎಲ್ಲರೂ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.