ನವದೆಹಲಿ: ಚಲಿಸುತ್ತಿರುವ ಬೈಕ್‌ನಲ್ಲಿ ವ್ಯಕ್ತಿಯೊಬ್ಬ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋವನ್ನು ದುರ್ಗ್ ಪೊಲೀಸರು ಹಂಚಿಕೊಂಡಿದ್ದು, ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.
ದುರ್ಗ್ ಪೊಲೀಸರು ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, 4,200 ರೂಪಾಯಿ ದಂಡ ವಿಧಿಸಿದ್ದಾರೆ. ಪೋಲೀಸರ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಾಹಸ ಪ್ರದರ್ಶನದ ವಿಡಿಯೋವನ್ನು ಹಂಚಿಕೊಂಡಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಚಲಿಸುತ್ತಿರುವ ಬೈಕ್‌ನಲ್ಲಿ ಹೆಲ್ಮೆಟ್ ಧರಿಸದ ವ್ಯಕ್ತಿ ಎರಡೂ ಕಾಲುಗಳನ್ನು ಒಂದೇ ಕಡೆ ಇಟ್ಟು ಕುಳಿತಿರುವುದನ್ನು ಕಾಣಬಹುದು. ರಸ್ತೆ ಸುರಕ್ಷತೆ ನಿಯಮಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಇತರ ರಸ್ತೆ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ.
“ಸ್ಟಂಟ್‌ಮ್ಯಾನ್ ಗಳು, ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುವ ಜನರು ಮತ್ತು ರಾಶ್ ಡ್ರೈವರ್‌ಗಳ ವಿರುದ್ಧ ದುರ್ಗ್ ಪೊಲೀಸರು ನಿರಂತರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ದಯವಿಟ್ಟು ಟ್ರಾಫಿಕ್ ನಿಯಮಗಳನ್ನು ಅನುಸರಿಸಿ” ಎಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.