Advertisement
ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಅರ್ಜಿಯು ಮು| ನ್ಯಾ| ಪ್ರಸನ್ನ ಬಿ.ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಸೋಮವಾರ ವಿಚಾರಣೆಗೆ ಬಂದಿತ್ತು. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಲು ಸರಕಾರದ ಕೋರಿಕೆಯಂತೆ ಕೊನೆಯ ಅವಕಾಶವಾಗಿ ಮೂರು ವಾರಗಳ ಕಾಲಾವಕಾಶ ನೀಡಿ ಹೈಕೋರ್ಟ್ 2023ರ ಜೂ. 21ರಂದು ಆದೇಶಿಸಿತ್ತು. ಸೋಮವಾರ ಅರ್ಜಿ ವಿಚಾರಣೆಗೆ ಬಂದಾಗ ಸರಕಾರದ ಪರ ವಕೀಲರು ವಾದ ಮಂಡಿಸಿ, ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನಷ್ಟು ಕಾಲಾವಕಾಶ ಬೇಕು ಎಂದು ಕೋರಿದರು.
Advertisement
ಪೊಲೀಸ್ ದೂರು ಪ್ರಾಧಿಕಾರ: ಸ್ಥಾನ ಭರ್ತಿಗೆ 2 ವಾರ ಕಾಲಾವಕಾಶ
11:23 PM Jul 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.