Advertisement

ಅಪ್ರಾಪ್ತೆ ಆತ್ಮಹತ್ಯೆಗೆ ಪ್ರಚೋದನೆ: ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರ ಹಿಂದೇಟು

10:26 AM Jan 15, 2023 | Team Udayavani |

ಚಿಕ್ಕಮಗಳೂರು: ಅಪ್ರಾಪ್ತ ವಯಸ್ಕ ಹುಡುಗಿಯೊಬ್ಬಳನ್ನು ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Advertisement

ಬಿಜೆಪಿ ಕಾರ್ಯಕರ್ತ 25 ವರ್ಷದ ಹಿತೇಶ್ ಎಂಬಾತನ ಮೇಲೆ ಆರೋಪ ಕೇಳಿ ಬಂದಿದೆ. ಕಳಸದ 17 ವರ್ಷದ ವಿದ್ಯಾರ್ಥಿನಿ ದೀಪ್ತಿ ಎಂಬಾಕೆ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಯತ್ನ ನಡೆಸಿದ್ದಳು. ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಜ.14ರಂದು ಮೃತ ಪಟ್ಟಿದ್ದಳು.

ಇದನ್ನೂ ಓದಿ:ಶ್ರೀರಂಗಪಟ್ಟಣ: ಕಾಶಿ ಚಂದ್ರಮೌಳೇಶ್ವರನಿಗೆ ಪ್ರಥಮ ಸೂರ್ಯ ರಶ್ಮಿ ಸ್ಪರ್ಶ

ದೀಪ್ತಿ ಸಾಯುವ ಮುನ್ನ ಡೆತ್ ನೋಟ್ ಬರೆದಿದ್ದು, ಹಿತೇಶ್ ವಂಚಿಸಿದ್ದಾಗಿ ಆರೋಪಿಸಿದ್ದಾಳೆ. ಪೋಷಕರು ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಹೋಗಿದ್ದರು. ಆದರೆ ಪೊಲೀಸರು ಆರೋಪಿ ಹಿತೇಶ್ ವಿರುದ್ಧ ದೂರು ದಾಖಲಿಸದೆ ಸತಾಯಿಸಿದರು.

ಪೋಷಕರ ದೂರು ಸ್ವೀಕರಿಸದ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದು, ಆ ಬಳಿಕ ದೂರು ಸ್ವೀಕರಿಸಿದ್ದಾರೆ. ಆದರೆ ಈವರೆಗೆ ಆರೋಪಿಯನ್ನು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next