Advertisement
ಸಭೆಯಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ಬರುವ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ಕೂಲಿ ಕಾರ್ಮಿಕರ ಬಗ್ಗೆ ಸಂಪೂರ್ಣ ದಾಖಲಾತಿ ಪಡೆದು ಕೆಲಸಕ್ಕೆ ನೇಮಿಸಿಕೊಳ್ಳುವಂತೆ ತಿಳಿಸಲಾಯಿತು.
Related Articles
Advertisement
ಕಾರ್ಮಿಕರ ಚಲನವಲನ ಗುರುತಿಸಿ ಅನುಮಾನ ಬಂದರೆ ಕೂಡಲೆ ಹತ್ತಿರದ ಪೊಲಿಸ್ ಠಾಣೆಗೆ ದೂರು ನಿಡುವಂತೆ ಸಲಹೆ ನೀಡಲಾಯಿತು.
ಸಭೆಯಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ, ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಬೆಳೆಗಾರರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಕಾರ್ಯದರ್ಶಿ ಮನೊಹರ್, ಕೋಮಾರ್ಕ್ ಮಾಜಿ ಅಧ್ಯಕ್ಷ ಡಿ.ಎಸ್.ರಘು. ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್ ಕುಮಾರ್ ಸೇರಿದಂತೆ ಅನೇಕ ಹಿರಿಯ ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.