Advertisement

ಮೂಡಿಗೆರೆ: ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ… ಪೊಲೀಸರ ನಿಯೋಜನೆ

08:31 AM Aug 02, 2023 | Team Udayavani |

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Advertisement

ಇತ್ತೀಚಿಗೆ ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ ಅಲ್ಲದೆ ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು, ಅಷ್ಟು ಮಾತ್ರವಲ್ಲದೆ ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು ಇದರಿಂದ ಒಮ್ಮೆ ರೋಗಿ ಹೊತ್ತ ಆಂಬುಲೆನ್ಸ್ ಕೂಡ ಪರದಾಟ ನಡೆಸಿತ್ತು, ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ, ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ.

ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇಡೀ ದಿನ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ “ಜಿಯೋಬುಕ್‌”- 4ಜಿ ಮತ್ತು ಡ್ಯುಯಲ್‌ ಬ್ಯಾಂಡ್‌ ವೈಫೈ ಕನೆಕ್ಟಿವಿಟಿ

Advertisement

Udayavani is now on Telegram. Click here to join our channel and stay updated with the latest news.

Next