Advertisement
ನಗರದ ಮಾರತ್ ಹಳ್ಳಿ ಸಮೀಪದ ಸಿದ್ದಾಪುರ ಕ್ರಾಸ್ ನಲ್ಲಿ ಬಸಪ್ಪ ಗಾಣೆಗಾರ, ಶರಣಬಸಪ್ಪ ಎಂಬ ಇಬ್ಬರು ಕಾನ್ಸ್ ಟೇಬಲ್ ಗಳು ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡಾದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಗೂಂಡಾಗಳ ರೀತಿ ಹಲ್ಲೆ ನಡೆಸಿದ್ದರು. ಈ ಎಲ್ಲಾ ಘಟನೆ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.
Related Articles
Advertisement
ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇಸ್ಪೀಟ್ ಆಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಲು ಹೋದ ವೇಳೆ, ಕುಡಿದ ಅಮಲಿನಲ್ಲಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಯಾರೇ ಆಗಿರಲಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಪಾಲನೆಗೆ ಹೋದವರ ಮೇಲೆ ಹಲ್ಲೆ ಸರಿಯಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.