Advertisement

ಪುಲ್ವಾಮಾ ದಲ್ಲಿ ಉಗ್ರರ ಹೊಂಚು ದಾಳಿ;ಪೊಲೀಸರಿಬ್ಬರು ಹುತಾತ್ಮ 

09:41 AM Jun 12, 2018 | Team Udayavani |

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ  ಶಸ್ತ್ರಧಾರಿ ಉಗ್ರರು ಮಂಗಳವಾರ ನಸುಕಿನ ವೇಳೆ  ಪೊಲೀಸರನ್ನು ಗುರಿಯಾಗಿರಿಸಿಕೊಂಡು ಹೊಂಚು ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಉಗ್ರರು ದಾಳಿ ನಡೆಸಿದ ಕೂಡಲೇ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಉಗ್ರರ ಗುಂಪಿನಲ್ಲಿ ಮೂರರಿಂದ ನಾಲ್ಕು ಮಂದಿ ಇದ್ದರೆಂದು ಪೊಲೀಸರು ತಿಳಿಸಿದ್ದಾರೆ. 

ಉಗ್ರರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗೆ ಸೇನಾ ಪಡೆಗಳು ಮತ್ತು ಪೊಲೀಸರು ಭಾರೀ ಕಾರ್ಯಾಚರಣೆಗಿಳಿದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next