Advertisement

ಕೈ ಪ್ರತಿಭಟನೆ ಹಿನ್ನಲೆ: ಅರ್ನಹ ಶಾಸಕ ಸುಧಾಕರ್ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪಗಾವಲು

10:09 AM Aug 30, 2019 | Team Udayavani |

ಚಿಕ್ಕಬಳ್ಳಾಪುರ: ಅರ್ನಹ ಶಾಸಕ ಡಾ.ಕೆ.ಸುಧಾಕರ್ ಯಾವುದೇ ಕಾರಣಕ್ಕೂ ಸ್ತ್ರೀ ಶಕ್ತಿ ಸಂಘಗಳಿಗೆ ಚೆಕ್ ವಿತರಣೆ ಮಾಡಬಾರದು. ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಕೆಲ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅರ್ನಹ ಶಾಸಕ ಸುಧಾಕರ್ ಭಾಗವಹಿಸಿದ್ದರ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಯಂತೆ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು. ಚಿಕ್ಕಬಳ್ಳಾಪುರ ಉಪ ವಿಭಾಗದ ಪೊಲೀಸ್ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

Advertisement

ಕೈನಾಯಕರ ನಾಪತ್ತೆ
ಆದರೆ ಸುಧಾಕರ್ ಚೆಕ್ ಗಳನ್ನು ವಿತರಿಸಿದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ಕಾಂಗ್ರೆಸ್ ನಾಯಕರು ನಾಪತ್ತೆ ಅಗಿದ್ದರು.

ಸ್ತ್ರೀಯರಿಗೆ ಸೀರೆ ವಿತರಣೆ
ಇದೇ ವೇಳೆ ಅರ್ನಹ ಶಾಸಕ ಸುಧಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 400 ಕ್ಕೂ ಹೆಚ್ಚು ಸ್ತ್ರೀ ಶಕ್ತಿ ಮಹಿಳೆಯರಿಗೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಅರಿಶಿನ, ಕುಂಕುಮ ನೀಡುವ ನೆಪದಲ್ಲಿ ಸೀರೆಗಳನ್ನು ವಿತರಿಸಿದ್ದು ಸಾಕಷ್ಟು ಚರ್ಚೆ ಗೆ ಗ್ರಾಸವಾಯಿತು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಸೀರೆ ವಿತರಣೆ ಇದೇ ಮೊದಲು ಅಲ್ಲ ಪ್ರತಿ ವರ್ಷವೂ ಗಣೇಶ ಚತುರ್ಥಿ ಹಬ್ಬಕ್ಕೆ ಕ್ಷೇತ್ರದಲ್ಲಿ ನ ಮಹಿಳೆಯರಿಗೆ ನೀಡುತ್ತಾ ಬರುತ್ತಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next