ಹಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಮೈದಾನದ ಸುತ್ತಲೂ ಬಿಗಿ ಬಂದೋಬಸ್ತು ಏರ್ಪಡಿಸಿದ್ದು, ಇದನ್ನು ವಿರೋಧಿಸಿ ಹಿಂದುಪರ ಸಂಘಟನೆಗಳು ಮುತ್ತಿಗೆ ಹಾಕುವ ಕರೆ ನೀಡಿದ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮಹಾನಗರ ಪಾಲಿಕೆ ಅನುಮತಿ ನೀಡಲಾಗಿದೆ. ಆದರೆ ಟಿಪ್ಪುವಿನ ಆಚರಣೆಯನ್ನು ಸರಕಾರ ರದ್ದು ಮಾಡಿದೆ. ಆದರೆ ಮಹಾನಗರ ಪಾಲಿಕೆ ರಾಜಕಾರಣ ಮಾಡಲು ಹೊರಟಿದೆ. ಈ ನಿರ್ಧಾರ ಹಿಂಪಡೆಯುವಂತೆ ಪಾಲಿಕೆ ಆಯುಕ್ತ ಹಾಗೂ ಮಹಾಪೌರರಿಗೆ ಮನವಿ ಮಾಡಿದ್ದರು. ಇದೀಗ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುತ್ತಿಗೆ ಹಾಕುವ ಎಚ್ವರಿಕೆ ನೀಡಿದ್ದರು. ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮೈದಾನ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
ಆಚರಣೆಗೆ ಸಿದ್ದತೆ: ಎಐಎಂಐಎಂ ಪಕ್ಷದ ಕಾರ್ಯದರ್ಶಿ ಟಿಪ್ಪು ಆಚರಣೆಗೆ ಅವಕಾಶ ಕೋರಿದ್ದರ ಹಿನ್ನೆಲೆಯಲ್ಲಿ ಮೈದಾನದಲ್ಲಿ ಪಿಉರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ. ಇಲ್ಲಿರುವ ಧಾರ್ಮಿಕ ಕಟ್ಟಡಕ್ಕೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ : ಸಾಲಗಾರರ ಕಿರಿಕಿರಿ: 3ಮಕ್ಕಳು ಸೇರಿ ಒಂದೇ ಕುಟುಂಬದ 5ಮಂದಿ ಆತ್ಮಹತ್ಯೆ, ಓರ್ವಳ ಸ್ಥಿತಿ ಗಂಭೀರ