Advertisement

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

10:00 AM Jan 12, 2024 | Team Udayavani |

ಹೊಸಪೇಟೆ: ವಿಜಯನಗರ‌ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದ್ದು, ಲಾಡ್ಜ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿ, ಸಂತ್ರಸ್ತೆಯರನ್ನು ರಕ್ಷಣೆ ಮಾಡಿದ್ದಾರೆ.

Advertisement

ಅಂಗವಿಕಲರು, ಅಪ್ರಾಪ್ತೆಯರನ್ನು ಸಹ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಲಾಡ್ಜ್ ನಲ್ಲಿ ಹೀನಾಯ ಸ್ಥಿತಿಯಲ್ಲಿ ಅಡಗುತಾಣಗಳು ಮಾಡಿಕೊಂಡು ಸ್ವಾಗತಕಾರನ ಕಾಲಿನ ಕೆಳಗೆ ಎಚ್ಚರಿಕೆ ಗಂಟೆಯ ವ್ಯವಸ್ಥೆ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ಕಾಲಿನಿಂದಲೇ ಬೆಲ್ ಒತ್ತಿ ಎಚ್ಚರಿಸುತ್ತಿದ್ದರು ಎನ್ನಲಾಗಿದೆ.

ಒಡನಾಡಿ ಸೇವಾ ಸಂಸ್ಥೆಯ ಸಂಘಟಕ ಶರಿಲ್ ಎ ಅಂತೋನಿ ನೀಡಿದ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: jobs scam: ಬಂಗಾಳ ಸಚಿವರ ನಿವಾಸ ಸೇರಿ ಹಲವೆಡೆ ಇಡಿ ದಾಳಿ, ದಾಖಲೆ ಪರಿಶೀಲನೆ

Advertisement

Udayavani is now on Telegram. Click here to join our channel and stay updated with the latest news.

Next