Advertisement

Kunigal ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಮೂವರ ಬಂಧ‌ನ

07:09 PM Dec 08, 2023 | Team Udayavani |

ಕುಣಿಗಲ್: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ ಮೂರು ಮಂದಿಯನ್ನು ಬಂಧಿಸಿರುವ ಘಟನೆ ಪಟ್ಟಣದ ಕೆಆರ್‌ಎಸ್ ಅಗ್ರಹಾರ ಹೊಸಬಡವಣೆ, ಬಾಲಕರ ವಸತಿ ನಿಲಯ ಸಮೀಪ ನಡೆದಿದೆ.

Advertisement

ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಗ್ರಾಮದ ಜಲ್ಲಿಪಾಳ್ಯ ಗ್ರಾಮದ ಅಂದಾನಯ್ಯ ಸೇರಿದಂತೆ ಇಬ್ಬರು ಮಹಿಳೆಯರನ್ನು ಪೊಲೀಸರು ಬಂದಿಸಿದ್ದಾರೆ.

ಅಂದಾನಯ್ಯ ಬಾಲಕರ ವಸತಿ ಗೃಹ ಸಮೀಪ ಮನೆಯೊಂದನ್ನು ಬಾಡಿಗೆ ಪಡೆದು ಇಬ್ಬರನ್ನು ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಪಿಐ ನವೀನ್‌ಗೌಡ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಅಂದಾನಯ್ಯ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next