Advertisement
ಕಳಂಜದ ಅಯ್ಯನಕಟ್ಟೆ ಕಲ್ಲಮಾಡ ದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿಯಂತೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ 40 ಕೋಳಿಗಳು, ಕೆಲವು ದ್ವಿಚಕ್ರ ವಾಹನಗಳು ಹಾಗೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಳಿ ಅಂಕ ಕಾನೂನು ಬಾಹಿರ ವಾಗಿದ್ದು, ಕೋಳಿ ಅಂಕ ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಇಂತಹ ಅಕ್ರಮ ಚಟುವಟಿಕೆಗಳು ನಡೆಸುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೋಮವಾರವಷ್ಟೇ ಎಸ್ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದರು. ಅದರ ಬೆನ್ನಲ್ಲೆ ಪೊಲೀಸರು ಇದೀಗ ಕೋಳಿ ಅಂಕ ನಡೆಸುತ್ತಿರುವಲ್ಲಿಗೆ ದಾಳಿ ನಡೆಸಲು ಆರಂಭಿಸಿದ್ದಾರೆ.