Advertisement

ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಪೊಲೀಸ್ ವಶಕ್ಕೆ

04:49 PM Mar 04, 2021 | keerthan |

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ಜರುಗಿದೆ.

Advertisement

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಸುಕಿನಲ್ಲಿ ಪಿಎಸ್ಐ ರವಿ ಯಡವಣ್ಣವರ ನೇತೃತ್ವದಲ್ಲಿ ದಾಳಿ ನಡೆಸಿರುವ ಪೊಲೀಸರು, 5 ಬುಲೆರೋ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ವಶಕ್ಕೆ ಪಡೆದಿದ್ದು, ಇವುಗಳ ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಹಾಂತಗೌಡ ಬಿರಾದಾರ್ ಎಂಬುವವರಿಗೆ ಸೇರಿದ ಬುಲೆರೋ ವಾಹನಗಳನ್ನು ಪೊಲೀಸರು ತಡೆಯುತ್ತಲೇ 3 ವಾಹನಗಳ ನಾಲ್ವರು ಚಾಲಕರು ಬುಲೆರೋ ಬಿಟ್ಟು ಪರಾರಿಯಾಗಿದ್ದು, ಓರ್ವ ಚಾಲಕ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಬಂಧಿತ ಚಾಲಕ ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಲಭ್ಯ ಮಾಹಿತಿ ಪ್ರಕಾರ ಕಲ್ಲು ಗಣಿಗಾರಿಕೆಯಲ್ಲಿ ಅಕ್ರಮವಾಗಿ ಭಾರಿ ಪ್ರಮಾಣದ ಬಂಡೆಗಳನ್ನು ಒಡೆಯಲು ಈ ಸ್ಫೋಟಕವನ್ನು ಮಾರಾಟಕ್ಕಾಗಿ ಅಕ್ರಮವಾಗಿ ರಾತ್ರಿ ವೇಳೆ ಸಾಗಾಟ ಮಾಡುತ್ತಿದ್ದರೆಂದು ಪೊಲೀಸರು ತಿಳಿಸಿದ್ದು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next