ಮುಂಬಯಿ : ಬಿಜೆಪಿ ನಾಯಕಿ ಚಿತ್ರಾ ವಾಘ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಶನಿವಾರ ಮಾಡೆಲ್ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಉರ್ಫಿ ಅವರನ್ನು ವಿಚಾರಣೆಗೆ ಕರೆದ ನಂತರ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಅಂಬೋಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರ ಬಿಜೆಪಿಯ ಮಹಿಳಾ ವಿಭಾಗದ ಮುಖ್ಯಸ್ಥೆ ವಾಘ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ‘ಅನುಚಿತ’ ಉಡುಗೆ ತೊಟ್ಟಿದ್ದಕ್ಕಾಗಿ ಜಾವೇದ್ ವಿರುದ್ಧ ದೂರು ದಾಖಲಿಸಿದ್ದರು.
ವಾಘ್ ಅವರ ದೂರಿನ ಮೇಲೆ ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.