ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಶನಿವಾರ ಬಂದೂಕುಧಾರಿಗಳ ಗುಂಪೊಂದು ಜನರ ಮೇಲೆ ಗುಂಡು ಹಾರಾಟ ನಡೆಸಿದ ಪರಿಣಾಮ ಮೂವರು ಅಸುನೀಗಿದ್ದು, 11 ಮಂದಿ ಗಾಯಗೊಂಡಿದ್ದಾರೆ.
Advertisement
ಪಹರೆಯಲ್ಲಿ ತೊಡಗಿದ್ದ ಪೊಲೀಸರಿಗೆ ನಗರದಲ್ಲಿ ಗುಂಡು ಹಾರಾಟ ನಡೆಯುತ್ತಿದ್ದದ್ದು ಗಮನಕ್ಕೆ ಬಂದಿದೆ. ಕೂಡಲೇ ಪೊಲೀಸರು ದಾಳಿಕೋರನನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ.
ಆದರೆ ದಾಳಿಕೋರರಲ್ಲಿ ಯಾರಾದರೂ ಗುಂಡೇಟಿಗೆ ಬಲಿಯಾಗಿದ್ದಾರಾ ಎಂಬ ಮಾಹಿತಿ ತಿಳಿದುಬಂದಿಲ್ಲ ಎಂದು ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಫ್.ಪೇಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ.