Advertisement

ನಗರದಲ್ಲಿ ಪೊಲೀಸ್‌ ಬಂದೋಬಸ್ತ್

10:58 AM Dec 20, 2019 | Team Udayavani |

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆಯುಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು. ಬಂದ್‌ ಹಾಗೂ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣದಿಂದ ಮಹಾನಗರದಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Advertisement

ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಗಸ್ತು ವಾಹನಗಳು ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಬಡಾವಣೆಗಳಲ್ಲಿ ಗಸ್ತಿನಲ್ಲಿದ್ದರು. ಪ್ರಮುಖವಾಗಿ ಕಿತ್ತೂರುಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರಿದ್ದರು. ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆಯುವ ಸೂಚನೆಯಿದ್ದ ಕಾರಣ ಆಯ್ದ ಸ್ಥಳಗಳಲ್ಲಿ ಬಿಗಿ ಭದ್ರತೆ ನೀಡಲಾಗಿತ್ತು. ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸಮಾನ ಮನಸ್ಕರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಗೆ ಮುಂದಾಗಿರುವುದರನ್ನು ಹೊರತುಪಡಿಸಿದರೆ ನಗರದಲ್ಲಿ ಯಾವುದೇ ಹೋರಾಟಗಳು ನಡೆದಿಲ್ಲ. ಸ್ಥಳೀಯ ಪೊಲೀಸರೊಂದಿಗೆ ಸಿಎಆರ್‌, ಕೆಎಸ್‌ ಆರ್‌ಪಿ ತುಕಡಿಗಳನ್ನು ಬಂದೋಬಸ್ತಿಗೆ ನಿಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next