Advertisement

ಬೆಂಗಳೂರು: ಮಗುವನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟು

01:50 PM Oct 12, 2020 | keerthan |

ಬೆಂಗಳೂರು: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಇನ್ ಸ್ಪೆಕ್ಟರ್ ಸುನೀಲ್ ನಾಯ್ಕ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

Advertisement

ಆರೋಪಿಯನ್ನು ಚೆನ್ನೈ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯು ರವಿವಾರ ಮಧ್ಯಾಹ್ನ ಮೆಜಿಸ್ಟಿಕ್ ನಿಂದ ನಾಲ್ಕು ವರ್ಷದ ಮಗುವನ್ನು ಅಪಹರಿಸಿದ್ದ. ನಂತರ ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿನ ದೌರ್ಜನ್ಯವೆಸಗಿದ್ದ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಅತ್ಯಾಧುನಿಕ ಬಂಧೂಕುಗಳೊಂದಿಗೆ ನಾಲ್ವರು‌ ಬೇಟೆಗಾರರ ಬಂಧನ

ಪರಾರಿಯಾಗಿದ್ದ ಆರೋಪಿಗಾಗಿ ಪೊಲೀಸರು ನಿನ್ನೆಯಿಂದಲೇ ಹುಡುಕಾಟ ಆರಂಭಿಸಿದ್ದರು. ಆರೋಪಿ ದಿನೇಶ್ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ಆರ್ ಆರ್ ಕಲ್ಯಾಣ ಮಂಟಪದ ಬಳಿ ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಶ್ರೀರಾಂಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನೀಲ್ ನಾಯ್ಕ ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ನಂತರ ಆತನನ್ನು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next