Advertisement

ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು: ಸುರ್ಜೇವಾಲ

04:32 PM Apr 12, 2022 | Team Udayavani |

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ, ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಕೂಡಲೇ ಅವರನ್ನು ಬಂಧಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರ ತನ್ನ ಕಾರ್ಯಕರ್ತರನ್ನೇ ಬಿಟ್ಟಿಲ್ಲ ಎಂದಾದರೆ ಜನಸಾಮಾನ್ಯರನ್ನು ಇನ್ಯಾವ ಮಟ್ಟಿಗೆ ಲೂಟಿ ಮಾಡುತ್ತಿರಬಹುದು. ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಕೇಳಿ ಬಂದಾಗ ಬೊಮ್ಮಾಯಿ ಅವರು ಮೌನಕ್ಕೆ ಶರಣಾದರು, ಅಮಿತ್ ಶಾ ಅವರು ಕ್ರಮ ಕೈಗೊಳ್ಳಲು ನಿರಾಕರಿಸಿದರು. ಪ್ರಧಾನ ಮಂತ್ರಿಗಳಂತೂ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಅಂತಿಮವಾಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ಸಚಿವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೊಂದು ಭ್ರಷ್ಟಾಚಾರ, ಕೊಲೆ ಪ್ರಕರಣವಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಅವರೂ ಕೂಡ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಾಬೀತಾಗುತ್ತದೆ. ಸದಾ ‘ನಾ ಖಾವೂಂಗಾ ನಾ ಖಾನೇದೂಂಗಾ’ ಎಂದು ಹೇಳುವ ಪ್ರಧಾನ ಮೋದಿಗಳು ಅವರ ಮೂಗಿನ ಕೆಳಗೆ ರಾಜ್ಯದಲ್ಲಿ ‘ಖಾವೂಂಗಾ, ಖಿಲಾವೂಂಗಾ’ ನಡೆಯುತ್ತಿದ್ದರೂ ಅದಕ್ಕೆ ಪ್ರತಿಕ್ರಿಯಿಸುತ್ತಿಲ್ಲ ಎಂದರು.

ಇದನ್ನೂ ಓದಿ:ಗುಜರಾತ್: ಹಿಮ್ಮತ್ ನಗರದಲ್ಲಿ ಮತ್ತೆ ಕೋಮು ಘರ್ಷಣೆ, ಪೆಟ್ರೋಲ್ ಬಾಂಬ್ ದಾಳಿ

ಬೊಮ್ಮಾಯಿ ಹಾಗೂ ಬಿಜೆಪಿ ಮುಂದೆ ಪರೀಕ್ಷೆ ಇದ್ದು, ಅವರ ನಡೆ ಏನು ಎಂಬುದು ಸಾಬೀತಾಗಲಿದೆ. ಕೇವಲ ಅಲ್ಪಸಂಖ್ಯಾತರ ವಿರುದ್ಧ ದಾಳಿ ಕೋಮು ಗಲಭೆಗಳ ಮೂಲಕ ಈ ವಿಚಾರಗಳನ್ನು ಮರೆಮಾಚುವ ಇವರ ಪ್ರಯತ್ನ ಬಹಿರಂಗವಾಗಲಿದೆ. ಮುಖ್ಯಮಂತ್ರಿಗಳು ಇವರ ವಿರುದ್ಧ ಸಂಜೆ ಒಳಗಾಗಿ ಈಶ್ವರಪ್ಪನ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಿ, ಅವರನ್ನು ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದರೆ ನಾವು ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಿ ಅವರ ರಾಜೀನಾಮೆಗೆ ಆಗ್ರಹಿಸುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next