Advertisement

ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

12:01 PM Apr 22, 2021 | Team Udayavani |

ಕೋಲಾರ: ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು.

Advertisement

ಕೋಲಾರ ಹೊರವಲಯದ ಗ್ರಾಮಾಂತರ ಪ್ರದೇಶದ ಹಲವಾರು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ವಿಪರೀತ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ಕೋಲಾರ ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕಿನ ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್-19 ಕೈಮೀರಿ ಹರಡುತ್ತಿದೆ.

ನಗರ ಠಾಣೆ ಮತ್ತು ಗಲ್ ಪೇಟೆ ಠಾಣೆ ವ್ಯಾಪ್ತಿಯಲ್ಲಿನ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದರು. ಕೋಲಾರ ಜಿಲ್ಲೆಯಲ್ಲಿ ಗುರುವಾರ ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳು ಸಾವಿರ ಗಡಿ ದಾಟಿದೆ.

ಬುಧವಾರ ರಾತ್ರಿಯ ಮೊದಲ ದಿನದ ಕರ್ಫ್ಯೂ ನಂತರ ಅಂಗಡಿಗಳನ್ನು ತೆರೆಯಲು ಬಂದ ಮಾಲೀಕರಿಗೆ ಪೊಲೀಸರು ಮುಚ್ಚಿಸುವ ಶಾಕ್ ನೀಡಿದರು. ಜಿಲ್ಲಾಡಳಿತ ಕ್ರಮಕ್ಕೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next