Advertisement

ಠಾಣೆ ನೂತನ ಕಟ್ಟಡಕ್ಕೆ ಭೂಮಿ ಪೂಜೆ

04:46 PM Oct 14, 2021 | Team Udayavani |

ತುಮಕೂರು: ನಗರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಬುಧವಾರ ಭೂಮಿ ಪೂಜೆ ನೆರವೇರಿ ಸಿದರು. ನಗರದ ಡಿಸಿಸಿ ಬ್ಯಾಂಕ್‌ ಪಕ್ಕದಲ್ಲಿದ್ದ ನಗರಠಾಣೆ ಕಟ್ಟಡ ಶಿಥಿಲಗೊಂಡಿದ್ದರಿಂದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾ ಣಕ್ಕೆ ಸಚಿವರು ಅಧಿಕೃತವಾಗಿ ಚಾಲನೆ ನೀಡಿದರು.

Advertisement

ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಪೊಲೀಸ್‌ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಮುಂದಿನ 2 ವರ್ಷದಲ್ಲಿ ಈ ಕಾರ್ಯಕ್ರಮವನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಜಿಲ್ಲೆಯಲ್ಲಿ 5 ನೂತನ ಪೊಲೀಸ್‌ ಠಾಣೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲಾ ಕೇಂದ್ರ ತುಮಕೂರು ನಗರದಲ್ಲಿ 2 ಪೊಲೀಸ್‌ ಠಾಣೆ, ಚಿಕ್ಕನಾಯಕನಹಳ್ಳಿ ತಾಲೂಕಿನ 2 ಪೊಲೀಸ್‌ ಠಾಣೆ ಸೇರಿದಂತೆ ಒಟ್ಟು 5 ಹೊಸ ಠಾಣೆಗಳ ನಿರ್ಮಾಣವಾಗಲಿದೆ ಎಂದು ನುಡಿದರು.

ಇದನ್ನೂ ಓದಿ;- ಸರ್ಜಿಕಲ್ ಸ್ಟ್ರೈಕ್ ಬಳಿಕ ನಮ್ಮ ಸೈನ್ಯದ ಶಕ್ತಿ ಜಗತ್ತಿಗೆ ತಿಳಿದಿದೆ : ಅಮಿತ್ ಶಾ

 2 ಕೋಟಿ ರೂ.ವರೆಗೆ ಅನುದಾನ: ಒಂದು ಪೊಲೀಸ್‌ ಠಾಣೆ ನಿರ್ಮಾಣಕ್ಕೆ 2 ಕೋಟಿ ರೂ. ವರೆಗೆ ಅನುದಾನ ಮಂಜೂರು ಮಾಡಲಾಗುತ್ತಿದ್ದು, ಸರ್ಕಲ್‌ ಇನ್ಸ್‌ ಪೆಕ್ಟರ್‌ ಇರುವ ಪೊಲೀಸ್‌ ಠಾಣೆಗಳನ್ನು 2 ಅಂತಸ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸಬ್‌ ಇನ್ಸ್‌ಪೆಕ್ಟರ್‌ ಠಾಣೆಗಳಿಗೆ ಒಂದು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Advertisement

ಸಂಸದ ಜಿ.ಎಸ್‌. ಬಸವರಾಜು, ಶಾಸಕ ಜ್ಯೋತಿಗಣೇಶ್‌, ಪಾಲಿಕೆ ಮೇಯರ್‌ ಬಿ.ಜಿ. ಕೃಷ್ಣಪ್ಪ, ಪಾಲಿಕೆ ಸದಸ್ಯ ಮಹೇಶ್‌, ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌, ಡಿವೈಎಸ್‌ಪಿ ಶ್ರೀನಿವಾಸ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ಗಳಾದ ನವೀನ್‌, ಮುನಿರಾಜು, ಪಿಎಸ್‌ಐಗಳಾದ ನವೀನ್‌, ಗಂಗಮ್ಮ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next