Advertisement

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅರ್ಜಿ ಆಹ್ವಾನ ತಾತ್ಕಾಲಿಕ ಸ್ಥಗಿತ

09:49 AM May 31, 2020 | keerthan |

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್)- 431 ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಕಲ್ಯಾಣ ಕರ್ನಾಟಕ) -125 ಹುದ್ದೆಗಳಿಗೆ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Advertisement

ಜೂನ್ ಒಂದರಿಂದ ಜೂನ್ 30ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಈ ಹಿಂದೆ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಆದರೆ ಸದ್ಯ ಆಡಳಿತಾತ್ಮಕ ಕಾರಣಗಳಿಂದ  ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ಸ್ಥಗತಿಗೊಳಿಸಲಾಗಿದ್ದು, ಮುಂದಿನ ಆಹ್ವಾನ ದಿನಾಂಕವನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next