Advertisement
ಸುದ್ದಿಗಾರರ ಜತೆ ಮಾತನಾಡಿ, ಸಿ.ಟಿ. ರವಿ ಜನಪ್ರತಿನಿಧಿ. ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ? ಇದರ ಆವಶ್ಯಕತೆ ಏನಿತ್ತು? ಇದಕ್ಕೆಲ್ಲ ನಿರ್ದೇಶಕರು ಯಾರು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಿಜೆಪಿ ಸ್ನೇಹಿತರು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡಿದರೆ ಎಲ್ಲ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ. ಮಂತ್ರಿಯೊಬ್ಬರ ಚಿತಾವಣೆಯಿಂದ ಯಾವ ಪೊಲೀಸ್ ಅಧಿಕಾರಿಗಳು ರವಿಗೆ ಮಾನಸಿಕ ಹಿಂಸೆ ಕೊಟ್ಟಿದ್ದಾರೋ ಅವರು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಭದ್ರಾವತಿಯ ವಿಐಎಸ್‌ಎಲ್ ಪುನಶ್ಚೇತನಕ್ಕೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ವಿವಿಧ ಭಾಗಗಳಲ್ಲಿರುವ ಉಕ್ಕು ಕಾರ್ಖಾನೆಗಳನ್ನು 1.30 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಕ್ಕೆ ಚಿಂತನೆ ನಡೆದಿದ್ದು, ದಕ್ಷಿಣ ಭಾರತದ ಪ್ರಮುಖ ಉಕ್ಕು ಕಾರ್ಖಾನೆಗಳಾದ ಭದ್ರಾವತಿ ಮತ್ತು ಸೇಲಂನ ಪ್ಲಾಂಟ್‌ಗಳ ಪುನಶ್ಚೇತನ ಸಂಬಂಧ ಮೂರು ಸಭೆಗಳನ್ನು ನಡೆಸಿದ್ದೇನೆ. ಚರ್ಚೆ ಆಧರಿಸಿ ಈಗ ಡಿಪಿಆರ್ ತಯಾರಾಗುತ್ತಿದೆ ಎಂದರು.