Advertisement

ಅನಂತನಾಗ್: ಉಗ್ರರೊಂದಿಗೆ ಗುಂಡಿನ ಕಾಳಗ; ಪೊಲೀಸ್ ಗೆ ಗಾಯ

08:22 PM Dec 29, 2021 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ದಕ್ಷಿಣ ಕಾಶ್ಮೀರ ಜಿಲ್ಲೆಯ ದೂರುವಿನ ನೌಗಾಮ್ ಶಹಾಬಾದ್‌ನಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಡೆಗಳು ಶೋಧ ನಡೆಸುತ್ತಿದ್ದಂತೆ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಆರಂಭಿಕ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ಚಕಮಕಿ ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next