Advertisement
ಈ ವೇಳೆ ಕೇಂದ್ರ ಸರಕಾರ ಶೀಘ್ರದಲ್ಲಿ ಹೊಸ ಶಿಕ್ಷಣ ನೀತಿಯನ್ನು ಪ್ರಕಟಿಸಲಿದ್ದು, ಈ ಹಿನ್ನೆಲೆ ಸರಕಾರಕ್ಕೆ 2 ಲಕ್ಷಕ್ಕೂ ಅಧಿಕ ಸಲಹೆಗಳು ಬಂದಿವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಬಾಹ್ಯ ವಾಣಿಜ್ಯ ಸಾಲ ಮತ್ತು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಯುವ ಎಂಜಿನಿಯರ್‌ಗಳಿಗೆ ಇಂಟರ್ನ್ ಶಿಪ್ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮಳನ್ನು ಆಯೋಜಿಸಲು ಸರಕಾರ ಯೋಜನೆ ರೂಪಿಸಿದೆ ಎಂದು ಎಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
Related Articles
ರಾಷ್ಟ್ರೀಯ ಪೊಲೀಸ್ ವಿಶ್ವ ವಿದ್ಯಾಲಯ ಮತ್ತು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಹಾಗೂ ಟಾಪ್ 100 ಸ್ಥಾನದಲ್ಲಿರುವ ಸಂಸ್ಥೆಗಳಿಂದ ಪದವಿ ಮಟ್ಟದ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ ಕಾರ್ಯಕ್ರಮವನ್ನು ಅವಕಾಶ ನೀಡಲು ನಿರ್ಧರಿಸಲಾಗಿದೆ.
Advertisement
ವಿಶೇಷ ಬ್ರಿಡ್ಜ್ ಕೋರ್ಸ್‌ಗಳ ಆರಂಭವೈದ್ಯರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ‘ಪಿಪಿಪಿ’ (ಸಾರ್ವಜನಿಕ, ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳೊಂದಿಗೆ ವೈದ್ಯಕೀಯ ಕಾಲೇಜುಗಳನ್ನು ಜೋಡಿಸಲಾಗುತ್ತದೆ. ಶಿಕ್ಷಕರು, ದಾದಿಯರು, ಪ್ಯಾರಾ ವೈದ್ಯಕೀಯ ಸಿಬ್ಬಂದಿ, ಆರೈಕೆದಾರರಿಗಾಗಿ ವಿಶೇಷ ಬ್ರಿಡ್ಜ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.