Advertisement

Congress ಸರಕಾರದ ಗೂಂಡಾ ನೀತಿ ಖಂಡನೀಯ: ಸತೀಶ್‌ ಕುಂಪಲ

12:19 AM Feb 09, 2024 | Team Udayavani |

ಮಂಗಳೂರು: ರಾಜ್ಯ ಸರಕಾರದಿಂದ ಯಾವುದೇ ಜನಪರ ಕಾರ್ಯಗಳು ನಡೆಯುತ್ತಿಲ್ಲ. ಜನರ ಹಾದಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಹತಾಶೆಯಿಂದ ಅಶಾಂತಿಯ ವಾತಾವರಣ ಸೃಷ್ಟಿಸಿ ಸಂಸದರ ವಿರುದ್ಧ ಗೂಬೆ ಕೂರಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ ಸರಕಾರದ ಗೂಂಡಾ ನೀತಿ ಖಂಡನೀಯ ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ದ.ಕ. ಸಂಸದ ನಳಿನ್‌ ಕುಮಾರ್‌ ನಿವಾಸಕ್ಕೆ ಕಾಂಗ್ರೆಸ್‌ನ ಎನ್‌ಎಸ್‌ಯುಐ ಘಟಕ ಮುತ್ತಿಗೆ ಹಾಕಿರುವುದು ಖಂಡನೀಯ. ಇದು ಕಾಂಗ್ರೆಸ್‌ನ ಕೀಳು ಮಟ್ಟದ ರಾಜಕೀಯ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಕಾನೂನು ಮೀರಿ ನಡೆಯಲು ಅವಕಾಶಗಳಿಲ್ಲ. ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಪರಿಸರದಲ್ಲಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ
ಸಂಸದ ನಳಿನ್‌ ಕುಮಾರ್‌ ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೆದ್ದಾರಿ, ರೈಲ್ವೇ, ವಿಮಾನ ನಿಲ್ದಾಣ, ಬಂದರು, ಪಾಲಿಕೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ದೊಡ್ಡ ಪ್ರಮಾಣದ ಅನುದಾನ ತಂದಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನ 3 ಬಾರಿ ಅವರನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next