Advertisement

10ಕ್ಕೆ ಪೋಲಿಯೋ ಅಭಿಯಾನ: ಡೀಸಿ

07:17 AM Mar 08, 2019 | Team Udayavani |

ಮೈಸೂರು: ಮಕ್ಕಳಲ್ಲಿ ಹರಡುವ ಪೋಲಿಯೋ ರೋಗವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮಾ.10 ರಂದು ಜಿಲ್ಲಾದ್ಯಂತ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆಭಿರಾಮ್‌ ಜಿ. ಶಂಕರ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಪೋಷಕರು ತಮ್ಮ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಕೊಡಿಸುವಂತೆ ಹೇಳಿದರು.

ಇಂದಿನ ಮಕ್ಕಳು ಆರೋಗ್ಯವಂತರಾಗಿ ಸದೃಢ ಸತøಜೆಗಳಾಗಿ ದೇಶವನ್ನು ಕಟ್ಟಲು ಈ ಕಾರ್ಯಾಚರಣೆ ಅತ್ಯಂತ ಮಹತ್ವ ಪಡೆದಿದೆ. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು. ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಪೋಲಿಯೋ ಲಸಿಕೆಗಳನ್ನು ಶೀತಲ ಸರಪಳಿಯಲ್ಲಿ ನಿರ್ವಹಿಸಿ, ಅತ್ಯಂತ ಸುರಕ್ಷಿತವಾಗಿ ಮಕ್ಕಳಿಗೆ ಲಸಿಕೆ ನೀಡಲಾಗುವುದು.

ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು , ಪೋಷಕರು ಹಾಗೂ ಸಮುದಾಯವು ಯಾವುದೇ ಆತಂಕಕ್ಕೆ ಒಳಗಾಗದೇ, ವದಂತಿಗಳಿಗೆ ಕಿವಿಗೊಡದೇ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ 2,49,954 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿಯೊಂದಿಗೆ ಪಲ್ಸ್‌ ಪೋಲಿಯೋ ಯೋಜನೆಯನ್ನು ರೂಪಿಸಲಾಗಿದೆ.

ಇದಕ್ಕಾಗಿ 1604 ಕೇಂದ್ರಗಳು, ಪ್ರವಾಸಿ ಸ್ಥಳಗಳಲ್ಲಿ 23 ಟ್ರನ್ಸಿಟ್‌ ಕೇಂದ್ರ ಹಾಗೂ ಒಂದು ಮೊಬೈಲ್‌ ಕೇಂದ್ರ ಸೇರಿದಂತೆ ಒಟ್ಟು 1624 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಲಸಿಕೆ ನೀಡಲು 6512 ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

Advertisement

ವಲಸೆಗಾರರು, ಕೂಲಿ ಕಾರ್ಮಿಕರು ವಾಸಿಸುವ ಪ್ರದೇಶ, ಕೊಳಗೇರಿ, ದುರ್ಗಮ ಪ್ರದೇಶ, ಕುಗ್ರಾಮ, ಗುಡ್ಡಗಾಡು ಪ್ರದೇಶ, ಹಾಡಿಗಳು, ಪ್ರವಾಸಿ ತಾಣಗಳು ಮುಂತಾದ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಿ ಲಸಿಕೆ ನೀಡಿ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸುತ್ತಮುತ್ತಲಿನ ಪ್ರದೇಶದ ಮಕ್ಕಳಿಗೆ ಲಸಿಕೆ ಕೊಡಿಸಲು ಸಹಾಯ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜು, ಆರ್‌ಸಿಎಚ್‌ಓ ಡಾ.ರವಿ, ವಿಶ್ವ ಆರೋಗ್ಯ ಸಂಸ್ಥೆಯ ಮೈಸೂರು ಜಿಲ್ಲೆಯ ಕನ್ಸಲ್ಟೆಂಟ್‌ ಡಾ.ಸುಧೀರ್‌ ನಾಯಕ್‌, ಜಿಪಂ ಉಪಕಾರ್ಯದರ್ಶಿ ಶಿವರಾಮೇಗೌಡ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next