Advertisement

ಪಲ್ಸ್‌  ಪೋಲಿಯೊ : ದಕ್ಷಿಣ ಕನ್ನಡ –ಶೇ. 92; ಉಡುಪಿ- ಶೇ. 97 ಸಾಧನೆ

01:00 AM Mar 11, 2019 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಒಟ್ಟು 1,579 ಬೂತ್‌ಗಳಲ್ಲಿ ರವಿವಾರ ಪಲ್ಸ್‌ ಪೋಲಿಯೊ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟಾರೆ ಶೇ.92.62 ಮಕ್ಕಳಿಗೆ, ಉಡುಪಿ ಜಿಲ್ಲೆಯಲ್ಲಿ ಶೇ. 97.27 ಮಕ್ಕಳಿಗೆ ಲಸಿಕೆ ಹಾಕಲಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ನಗರ ಪ್ರದೇಶದಲ್ಲಿ ಶೇ. 81.23 ಮತ್ತು ಗ್ರಾಮೀಣ ಪ್ರದೇಶದಲ್ಲಿ ಶೇ. 98.02ರಷ್ಟು ಲಸಿಕೆ ಹಾಕಲಾಗಿದೆ. ಮಾ. 11, 12ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಮಾ. 11ರಿಂದ 13ರ ವರೆಗೆ ನಗರ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆಯಿಂದ ದೂರ ಉಳಿದ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ.

ಮಂಗಳೂರು ನಗರದ ಲೇಡಿಗೋಶನ್‌ಆಸ್ಪತ್ರೆಯಲ್ಲಿ ರವಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಸುಗೂಸಿಗೆ ಲಸಿಕೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲು ಉದ್ಘಾಟಿಸಿದರು. ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಚಿವೆ ಡಾ| ಜಯಮಾಲಾ ಅವರು ಉದ್ಘಾಟಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next