Advertisement

ಜಿಲ್ಲಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

11:29 AM Feb 01, 2021 | Team Udayavani |

ಹಾಸನ: ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವುದನ್ನು ಪೋಷಕರು ಮರೆಯ ಬಾರದು ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

Advertisement

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಯಾವುದೇ ಒಂದು ಮಗು ಲಸಿಕೆ ಪಡೆಯದೆ ತೊಂದರೆಗೀಡಾಗಿ ಮುಂದಿನ ಭವಿಷ್ಯ ಹಾಳಾಬಾರದು. 5 ವರ್ಷದೊಳಗಿನ ಮಕ್ಕಳಿಗೆಈ ಹಿಂದೆ ಲಸಿಕೆ ಕೊಡಿಸಲಾಗಿದ್ದರೂ ಮತ್ತೆ ಹಾಕಿಸುವುದನ್ನು ಮರೆಯಬಾರದು ಎಂದು ಎಂ ದು ಹೇಳಿದರು.

ಉತ್ತಮ ಸಮಾಜ ನಿರ್ಮಾಣ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ತುಂಬಾ ನಿಗಾವಹಿಸಿದೆ. ಪೋಲಿಯೋ ರೋಗದಿಂದ ಶಾಶ್ವತ ಅಂಗವಿಕಲರಾಗುತ್ತಾರೆ. ಈ ಬಗ್ಗೆ ಹೆಚ್ಚು ಗಮನ ನೀಡಿ ಸರಿಯಾದ ಸಮಯಕ್ಕೆ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಮುಕ್ತ ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪ್ರತಿ ಮಗುವಿಗೂ ಲಸಿಕೆಯನ್ನು ತಪ್ಪದೇ ಕೊಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಹಾಸನ ಜಿಲ್ಲೆಯಲ್ಲಿ 5 ವರ್ಷಕ್ಕಿಂತ ಕಡಿಮೆಯಿರುವ ಎಲ್ಲಾ ಮಕ್ಕಳಿಗಾಗಿ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:ಲಸಿಕೆ ಹಾಕಿಸಿ, ಪೊಲೀಯೋ ತೊಲಗಿಸಿ

Advertisement

ಮನೆಗಳಿಗೆ ಭೇಟಿ: ರೋಗ ನಿರೋಧಕ ಶಕ್ತಿ ಕುಂಠಿತವಾಗಿರುವಂತಹ ಆರೋಗ್ಯ ಸಮಸ್ಯೆ ಗಳನ್ನು ಹೊಂದಿರುವ ಮಕ್ಕಳು ಈ ಅಭಿಯಾನದಿಂದ ಹೊರಗುಳಿಯುವ ಸಂಭವ ವಿದೆ. ಹಾಗಾಗಿ ಅಭಿಯಾನದ ಮೊದಲನೇ ದಿನ ಬೂತ್‌ ಮಟ್ಟದಲ್ಲಿ ಅಂಗನವಾಡಿ, ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಉಳಿದ ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯಕಾರ್ಯಕರ್ತರು ಮನೆಗಳಿಗೆ ಭೇಟಿ ಮಾಡಿ ಪೋಲಿಯೋ ಲಸಿಕೆ ನೀಡುತ್ತಾರೆ ಎಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ಹಿಮ್ಸ್‌ ನಿರ್ದೇಶಕ ಡಾ.ರವಿಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಕಾಂತರಾಜು, ಡಾ. ಲಕ್ಷ್ಮೀಕಾಂತ್‌, ಹಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯ‌ಸ್ಥ ಡಾ.ಪ್ರಸನ್ನಕುಮಾರ್‌, ತಾಲೂಕು ವೈದ್ಯಾಧಿಕಾರಿ ಡಾ.ವಿನಯ್‌, ಆಯುಷ್‌ ಅಧಿಕಾರಿ ವೀಣಾ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next