Advertisement

3.97 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

12:23 PM Mar 12, 2018 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರದಿಂದ ಆರಂಭವಾದ ಎರಡನೇ ಹಂತದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಐದು ವರ್ಷದೊಳಗಿನ 3,97,116 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ.

Advertisement

ಪಾಲಿಕೆಯ ಎಲ್ಲ 198 ವಾರ್ಡ್‌ಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಪಾಲಿಕೆಯ ಆರೋಗ್ಯ ಕೇಂದ್ರ, ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರ, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಅಭಿಯಾನಕ್ಕಾಗಿ 138 ಯೋಜನಾ ಘಟಕಗಳು, 3,347 ಬೂತ್‌ಗಳು, 390 ಸ್ಥಿರ ತಂಡಗಳು, 315 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, 14,586 ಲಿಸಿಕಾ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಾಗಿದೆ. ಅಭಿಯಾನದ ಮೇಲ್ವಿಚಾರಣೆಗಾಗಿ 729 ಅಧಿಕಾರಿಗಳು ಹಾಗೂ 20 ವಿಶೇಷ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಭಿಯಾನ ಮಾ.14ರವರೆಗೆ ನಡೆಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next