Advertisement
ಗ್ರಾಮೀಣ ಪ್ರದೇಶದಲ್ಲಿ 530 ಬೂತ್: ಈ ಕಾರ್ಯಕ್ರಮಕ್ಕೆ 622 ಪಲ್ಸ್ ಪೋಲಿಯೋ ಬೂತ್‌ಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ 92 ಬೂತ್‌ಗಳು ನಗರ ಪ್ರದೇಶದಲ್ಲಿ ಹಾಗೂ 530 ಬೂತ್‌ಗಳನ್ನು ಗ್ರಾಮೀಣ ಪ್ರದೇಶದಲ್ಲಿ ತೆರೆಯಲಾಗುತ್ತಿದೆ. ತಾಲೂಕುವಾರು ಬೂತ್‌ಗಳ ಸಂಖ್ಯೆಯನ್ನು ಪರಿಗಣಿಸುವುದಾದರೆ ಚಾಮರಾಜನಗರದಲ್ಲಿ 194, ಗುಂಡ್ಲುಪೇಟೆಯಲ್ಲಿ 158, ಕೊಳ್ಳೇಗಾಲದಲ್ಲಿ 223 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 47 ಬೂತ್‌ಗಳನ್ನು ತೆರೆಯಲಾಗುತ್ತಿದೆ.
Related Articles
Advertisement
ಕಾಡಂಚಿನ ಗ್ರಾಮಗಳು, ಬುಡಕಟ್ಟು ಹಾಡಿಗಳನ್ನು ಬಿಡದೇ, ಎಲ್ಲೆಡೆ ಲಸಿಕಾ ಕಾರ್ಯಕ್ರಮವನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೋಲಿಯೋ ಸಮಸ್ಯೆಯನ್ನು ತಡೆಯುವ ನಿಟ್ಟಿನಲ್ಲಿ 1995ರಿಂದ ಭಾರತದಲ್ಲಿ ಪ್ರತಿ ವರ್ಷ ಲಸಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೋಲಿಯೊ ವೈರಾಣು ದೇಹ ಸೇರದಂತೆ ನೋಡಿಕೊಳ್ಳುವ ಲಸಿಕೆಯನ್ನು 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ನೀಡಲಾಗುತ್ತಿದೆ. ಸದ್ಯ ಭಾರತ ಪೋಲಿಯೊ ಮುಕ್ತ ದೇಶವಾಗಿದೆ.
ಪ್ರತಿ ವರ್ಷ ದೇಶದ ಎಲ್ಲಾ ರಾಜ್ಯಗಳ, ಪ್ರತಿ ಗ್ರಾಮಗಳಲ್ಲೂ ಲಸಿಕಾ ಅಭಿಯಾನವನ್ನು ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಲಸಿಕೆಯ ಮಹತ್ವದ ಕುರಿತು ತಿಳಿಸಿ, ಪ್ರತಿ ಮಗುವಿಗೂ ಲಸಿಕೆ ದೊರೆಯುವಂತೆ ಮಾಡಲಾಗಿದೆ. ಅದರಂತೆ ಜ.19ರನ್ನು ರಾಷ್ಟ್ರೀಯ ರೋಗನಿರೋಧಕ ದಿನವಾಗಿ ಗುರುತಿಸಿ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ: ಡೀಸಿ ಕಾವೇರಿಚಾಮರಾಜನಗರ: ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ಸೂಚಿಸಿದ್ದಾರೆ. ಪೊಲೀಸ್ ಇಲಾಖೆ ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರ ಜನನಿಬಿಡ ಪ್ರದೇಶಗಳಲ್ಲಿ ಸಂಚಾರಿ ಬೂತ್‌ಗಳ ಮೂಲಕ ಪೋಷಕರೊಂದಿಗೆ ಪ್ರಯಾಣ ಮಾಡುವ ವುಕ್ಕಳಿಗೆ ಪೋಲಿಯೊ ಲಸಿಕೆ ಹಾಕಲು ಸಿಬ್ಬಂದಿ ನಿಯೋಜಿಸಬೇಕು. ಈ ಮೂಲಕ ಯಾವುದೇ ಮಗು, ಯಾವುದೇ ಕಾರಣದಿಂದ ಲಸಿಕೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಮಾನವ ಸಂಪನ್ಮೂಲವನ್ನು ಒದಗಿಸಿ ಹಾಗೂ ಅಂಗನವಾಡಿಗಳಲ್ಲಿ ಲಸಿಕಾ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಿಕೊಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲೆಗಳಲ್ಲಿ ಬೂತ್ ತೆರೆಯಲು ಅನುವು ಮಾಡಿಕೊಡಬೇಕು. ಲಸಿಕಾ ಕಾರ್ಯಕ್ರಮ ಮಹತ್ವ ಪೂರ್ಣವಾಗಿರುವುದರಿಂದ ಯಾವುದೇ ಅಡ್ಡಿ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸೆಸ್ಕ್ ಜ.17ರಿಂದ 22 ವರೆಗೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿರಂತರ 24 ಗಂಟೆಗಳ ವಿದ್ಯುತ್ ಸೌಲಭ್ಯವನ್ನು ಒದಗಿಸಬೇಕು. ಮುಖ್ಯವಾಗಿ ವಾಹನಗಳ ಅವಶ್ಯಕತೆ ಹೆಚ್ಚಿರುವುದರಿಂದ ಪ್ರಾದೇಶಿಕ ಸಾರಿಗೆ ಇಲಾಖೆ, ಕಾರ್ಯಕ್ರಮಕ್ಕೆ ಅಧಿಗ್ರಹಣ ಆದೇಶ ಹೊಂದಿರುವ ಸರ್ಕಾರಿ ವಾಹನಗಳನ್ನು ಸ್ವಾಧೀನಕ್ಕೆ ಪಡೆದು, ಆಯಾಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಜ.18ರೊಳಗೆ ತಪ್ಪದೇ ನಿಯೋಜಿಸಬೇಕು. ಪಲ್ಸ್ ಪೋಲಿಯೋ ಸಂಪೂರ್ಣ ಯಶಸ್ವಿಗೊಳಿಸುವ ಉದ್ದೇಶದಿಂದ, ಕಾಡಂಚಿನ ಗ್ರಾಮಗಳು ಹಾಗೂ ದುರ್ಗಮ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿಸಿರುವ ವಾಹನಗಳ ಮುಕ್ತ ಓಡಾಟಕ್ಕೆ ಅರಣ್ಯ ಇಲಾಖೆ ಅವಕಾಶ ನೀಡಬೇಕು ಎಂದು ಸೂಚಿಸಿದ್ದಾರೆ. ಪೌರಾಡಳಿತ ಇಲಾಖೆ, ಸ್ವಯಂ-ಸೇವಾ ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ನರ್ಸಿಂಗ್ ಕಾಲೇಜುಗಳು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು. ಎಲ್ಲೆಡೆ ಪ್ರಚಾರ ನೀಡುವ ಜತೆಗೆ ಅಗತ್ಯ ಸ್ವಯಂ- ಸೇವಕರನ್ನು, ನರ್ಸಿಂಗ್ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ನಿಯೋಜಿಸಬೇಕು. ಪುರಸಭಾ, ಪಟ್ಟಣ ಪಂಚಾಯ್ತಿ, ನಗರಸಭೆ, ಗ್ರಾಮ ಪಂಚಾಯ್ತಿಗಳಲ್ಲಿ ತೆರೆಯಲಾಗುವ ಲಸಿಕಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಊಟೋಪಚಾರ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಸೂಕ್ತ ರೀತಿಯಲ್ಲಿ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. * ಕೆ.ಎಸ್. ಬನಶಂಕರ ಆರಾಧ್ಯ