Advertisement
ಜೆಡಿಎಸ್‌ನ ಇಬ್ಬರು ಪ್ರಭಾವಿ ಮುಖಂಡರು ಜೆಡಿಎಸ್ ಪಕ್ಷ ತೊರೆದಿದ್ದಾರೆ, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸಬರು ರಾಜಕೀಯ ಪ್ರವೇಶಿಸಲು ರಂಗ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ, ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ವಲಸೆ ಹೋಗಲಾರಂಭಿಸಿದ್ದಾರೆ.
Related Articles
Advertisement
ಶ್ರೀನಿವಾಸ್ ಯಾವ ಪಕ್ಷಕ್ಕೆ?: ಗುಬ್ಬಿ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ ಈಗಾಗಲೇ ಜೆಡಿಎಸ್‌ನಿಂದ ದೂರ ಸರಿದಿರುವ ಹಿನ್ನೆಲೆ ಜೆಡಿಎಸ್ ಮುಖಂಡರು, ಕಾರ್ಯಕರ್ತರೂ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮುಂದೆ ತಮ್ಮ ನಾಯಕ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಆ ಪಕ್ಷಕ್ಕೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಕಾರ್ಯಕರ್ತರನ್ನು ಕರೆಸಿ ಸಭೆ ಮಾಡಿರುವ ಶಾಸಕ ಶ್ರೀನಿವಾಸ್ ಯಾವ ಪಕ್ಷಕ್ಕೆ ಹೋಗುತ್ತೇನೆ ಎನ್ನುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಬೇಕಾಗಿರುವುದು ಮಾತ್ರ ಬಾಕಿ ಇದೆ.
ಜಿಲ್ಲೆಯ ಹಲವು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಿಗಿಯಲು ತಯಾರಿಯಲ್ಲಿ ತೊಡಗಿದ್ದಾರೆ. ಈ ಬಾರಿ ಹಲವು ಹೊಸ ಮುಖಗಳು ರಾಜಕೀಯ ಪ್ರವೇಶಿಸುವುದು ನಿಶ್ಚಿತ ಎನ್ನಲಾಗುತ್ತಿದೆ. ತುಮಕೂರು ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಇದ್ದರೂ ಆಡಳಿತರೂಢ ಬಿಜೆಪಿಯಲ್ಲಿ ಒಂದು ಗುಂಪಿನಿಂದ ಆಂತರಿಕ ಬೇಗುದಿ ಎದ್ದಿದೆ. ಮಾಜಿ ಸಚಿವ ಸೊಗಡು ಎಸ್.ಶಿವಣ್ಣ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.
ಸ್ಪರ್ಧೆಗೆ ಹಲವರು ತಯಾರಿ ಕುಣಿಗಲ್ ಹಾಲಿ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಇದ್ದರೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಸಾಸಲು ಸತೀಶ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಚಿಕ್ಕನಾಯಕನ ಹಳ್ಳಿಯಲ್ಲಿ ಹಾಲಿ ಸಚಿವ ಜೆ.ಸಿ.ಮಾಧುಸ್ವಾಮಿ ಇದ್ದರೂ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ರೀತಿ ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ರಾಜಕೀಯ ಚದುರಂಗದಾಟಗಳು ಆರಂಭಗೊಂಡಿವೆ.
ಅಸಮಾಧಾನಿತರು ಪಕ್ಷದಿಂದಪಕ್ಷಕ್ಕೆ ಜಿಗಿತ: ಸಾಧ್ಯತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮೇಲೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಕಣ್ಣಿಟ್ಟಿವೆ. 2023ರ ಚುನಾವಣೆಯಲ್ಲಿ ಮೂರು ಪಕ್ಷಗಳು ಅಧಿಕ ಸ್ಥಾನ ಪಡೆಯಲೇ ಬೇಕು ಎಂದು ರಣತಂತ್ರ ರೂಪಿಸುತ್ತಿವೆ. ಅದಕ್ಕಾಗಿ ಇತರೆ ಪಕ್ಷಗಳಲ್ಲಿ ಅಸಮಾಧಾನ ಹೊಂದಿರುವ ಮುಖಂಡರು ಮತ್ತು ಕಾರ್ಯಕರ್ತರನ್ನು ತಮ್ಮ ಪಕ್ಷದತ್ತ ಸೆಳೆಯಲು ಈಗಿನಿಂದಲೇ ಕಾರ್ಯತಂತ್ರ ಆರಂಭಿಸಿದ್ದಾರೆ.
ಮೂರು ಪಕ್ಷಗಳಲ್ಲಿಯೂ ಅಸಮಾಧಾನಗೊಂಡಿರುವ ಮುಖಂಡರು ಪಕ್ಷದಿಂದ ಪಕ್ಷಕ್ಕೆ ಜಿಗಿಯಲು ಸಜ್ಜಾಗಿದ್ದಾರೆ. ಚುನಾವಣೆ ವೇಳೆಯಲ್ಲಿ ಮತದಾರನನ್ನು ತಲುಪಲು ಸಾಧ್ಯವಿಲ್ಲ ಎಂದು ಈಗಾಗಲೇ ಕೆಲವು ಮುಖಂಡರು ಕ್ಷೇತ್ರ ಪ್ರವಾಸ ಆರಂಭ ಮಾಡಿ ಜನರಿಗೆ ಹತ್ತಿರವಾಗಲು ನಾಯಕರು ತೆರಳುತ್ತಿದ್ದಾರೆ.
– ಚಿ.ನಿ.ಪುರುಷೋತ್ತಮ್