Advertisement
ಸಿಎಂ ಕುಟುಂಬಕ್ಕೆ ಮುಡಾ ನಿವೇಶನ ಹಂಚಿಕೆಯಾಗಿರುವ ಆರೋಪದ ಜತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ವರ್ಗಾವಣೆ, ಗ್ಯಾರಂಟಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳನ್ನು ಜನರಿಗೆ ತಿಳಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜನ ಜಾಗರಣ ಕಾರ್ಯಕ್ರಮ ರೂಪಿಸಲು ಮುಂದಾಗಿದೆ.
Related Articles
ಅಷ್ಟೇ ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿರುವ ಸರಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ಕೈಗೊಳ್ಳಲು ಗಂಭೀರ ಆಲೋಚನೆ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರು ನೀಡುವ ಕುರಿತೂ ಪಕ್ಷದೊಳಗೆ ಚಿಂತನ-ಮಂಥನ ನಡೆದಿದೆ.
Advertisement
ಮಾಸಾಂತ್ಯಕ್ಕೆ ಬಳ್ಳಾರಿ ಸಮಾವೇಶವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಮುಂದಿಟ್ಟುಕೊಂಡು ಆಗಸ್ಟ್ ಮಾಸಾಂತ್ಯ ಅಥವಾ ಸಪ್ಟೆಂಬರ್ ತಿಂಗಳ ಆರಂಭದಲ್ಲಿ ಬಳ್ಳಾರಿಯಲ್ಲಿ ಸಮಾವೇಶ ನಡೆಸುವ ಯೋಜನೆಯೂ ಇದೆ. ಪ್ರಮುಖವಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ.ನಾಗೇಂದ್ರ ಹೆಸರು ಪ್ರಕರಣದಲ್ಲಿ ಕೇಳಿಬಂದಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರೂ ಎಸ್‌ಐಟಿ ತನಿಖೆ ದಾರಿ ತಪ್ಪುತ್ತಿದೆ ಎನ್ನುವ ಸಂಶಯ ಮೂಡಿದೆ. ಹೀಗಾಗಿ ಬಳ್ಳಾರಿಯಲ್ಲಿ ಸಮಾವೇಶ ನಡೆಸಿ ಜನಾಭಿಪ್ರಾಯ ಮೂಡಿಸಲು ಬಿಜೆಪಿ ವೇದಿಕೆ ಸಜ್ಜುಗೊಳಿಸುತ್ತಿದೆ.