Advertisement
ಮಂಗಳವಾರ ಬೆಂಗಳೂರು ಪ್ರಸ್‌ಕ್ಲಬ್ ಹಾಗೂ ವರದಿಗಾರರ ಕೂಟದಿಂದ ಜಂಟಿಯಾಗಿ ಆಯೋಜಿಸಿದ್ದ “ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಗರದ ಬಡವರಿಗೆ ರಿಯಾಯಿತಿ ದರದಲ್ಲಿ ತಿಂಡಿ-ಊಟ ಪೂರೈಸುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆದರೆ, ಕೆಲವರು ಆರೋಪ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಕ್ಯಾಂಟೀನ್ ನಿರ್ಮಾಣಕ್ಕೆ ಮೀಸಲಿಟ್ಟಿರುವ 73 ಕೋಟಿಯಲ್ಲಿ 65 ಕೋಟಿ ಅವ್ಯವಹಾರ ಆಗಿದೆ ಎಂದು ಆರೋಪಿಸುತ್ತಾರೆ,’ ಎಂದು ವ್ಯಂಗ್ಯವಾಡಿದರು.
Related Articles
ಬಸವೇಶ್ವರ ವೃತ್ತದಿಂದ – ಹೆಬ್ಟಾಳದವರೆಗೆ ನಿರ್ಮಿಸಲು ಉದ್ದೇಶಿಸಿದ್ದ ಉಕ್ಕಿನ ಸೇತುವೆ ಯೋಜನೆ ನಮ್ಮ ಯೋಜನೆಯಾಗಿರಲಿಲ್ಲ. ಹಿಂದಿನ ಸರ್ಕಾರಕ್ಕೆ ತಜ್ಞರ ಸಮಿತಿ ಯೋಜನೆ ಪ್ರಸ್ತಾಪ ಮಾಡಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದೇವು. ಆದರೆ, ಯೋಜನೆ ಜಾರಿಯಾಗುವ ಮೊದಲೇ 65 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಕೆಲವರು ಆರೋಪಿಸಿದ್ದರು. ಒಂದೊಮ್ಮೆ ನಾವು ಲಂಚ ಪಡೆದಿದ್ದರೆ ಅಷ್ಟು ಧೈರ್ಯವಾಗಿ ಯೋಜನೆ ಕೈಬಿಡಲು ಆಗುತ್ತಿತ್ತೇ? ಎಂದು ಪ್ರಶ್ನಿಸಿದರು.
Advertisement
ಆಧಾರವಿಲ್ಲದೆ ಟೀಕಿಸಬೇಡಿ; ಮಾಧ್ಯಮಗಳಿಗೆ ಜಾರ್ಜ್ ಮನವಿ ಕೆಲವರು ಆಧಾರ ರಹಿತವಾದ ಆರೋಪ ಮಾಡಿ “ಹಿಟ್ ಅಂಡ್ ರನ್’ ಮಾಡುತ್ತಾರೆ. ಮಾಧ್ಯಮವರು ಇಂತಹ ಆರೋಪಗಳನ್ನೇ ಮುಂದಿಟ್ಟುಕೊಂಡು ಟೀಕಿಸುತ್ತಾರೆ. ರಾಜಕಾರಣದ ಅವಧಿ ಕಡಿಮೆ ಇರುವುದರಿಂದ ನಾವು ನಿರ್ದೋಷಿಗಳೆಂದು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ತಪ್ಪು ಮಾಡಿದಾಗ, ಆಧಾರವಿದ್ದರೆ ಅಥವಾ ಕನಿಷ್ಠ ಪಕ್ಷ ಮೇಲ್ನೋಟಕ್ಕೆ ಆರೋಪಗಳು ನಿಜ ಎಂದು ಅನಿಸಿದರೆ ಟೀಕಿಸಿ. ಆದರೆ, ಆಧಾರ ರಹಿತ ಆರೋಪಗಳನ್ನು ಮುಂದಿಟ್ಟುಕೊಂಡು ಟೀಕಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದರು. ಮನೆ ಬೇಕೆಂದು ಯಾರೂ ಅರ್ಜಿ ಹಾಕಿಲ್ಲ!
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಇದರೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಆದರೆ, ಈವರೆಗೆ ಯಾರೂ ಮನೆ ನೀಡುವಂತೆ ಅರ್ಜಿಯನ್ನು ನೀಡಿಲ್ಲ ಎಂದ ಜಾರ್ಜ್, ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಆನೇಕಲ್‌ಗೆ ಹರಿಸಲು 1800 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಸಚಿವ ಸಂಪುಟ ಸಭೆ ಒಪ್ಪಿಗೆ ದೊರೆಯಬೇಕಿದೆ ಎಂದರು. ಸೋಷಿಯಲ್ ಮೀಡಿಯಾ ಮೊರೆ
ಬೆಂಗಳೂರು ಅಭಿವೃದ್ಧಿ ವ್ಯಾಪ್ತಿಗೆ ಬರುವ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬಿಎಂಆರ್‌ಸಿಎಲ್ ಹಾಗೂ ಬಿಎಂಆರ್‌ಡಿಎಗಳಿಂದ ಕೈಗೆತ್ತಿಕೊಳ್ಳುವ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತ್ಯೇಕ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಮಾಡಲಾಗುತ್ತಿದೆ ಎಂದು ಜಾರ್ಜ್ ತಿಳಿಸಿದರು. ವಿವಿಧ ಇಲಾಖೆಗಳಿಂದ ಕೈಗೆತ್ತಿಕೊಂಡ ಕಾರ್ಯಕ್ರಮಗಳು ಹಾಗೂ ಪ್ರಗತಿ ವಿವರಗಳ ಪ್ರಗತಿ ಲಭ್ಯವಾಗಲಿದ್ದು, ವಾರದೊಳಗೆ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು. ಬೆಳ್ಳಂದೂರು ಕೆರೆ ಅಭಿವೃದ್ಧಿ ವಿಚಾರದಲ್ಲಿ ಆಗಿದ್ದೇನೆ? ಜಾರ್ಜ್ ಹೇಳಿದ್ದು
ನಗರದ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ನಮ್ಮ ಬೆಂಗಳೂರು ಫೌಂಡೇಷನ್‌ನ ಪಬ್ಬಿಶೆಟ್ಟಿ, ಪರಿಸರವಾದಿ ಯಲ್ಲಪ್ಪರೆಡ್ಡಿ ಸೇರಿದಂತೆ ಹಲವಾರು ತಜ್ಞರು ಇದ್ದರು. ಕೆರೆಗಳ ಸಂರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿ ವರದಿ ನೀಡಿತ್ತು. ಅದರ ಆಧಾರದ ಮೇಲೆ ಟೆಂಡರ್ ಕರೆಯಲಾಗಿತ್ತು. ಇದರೊಂದಿಗೆ ವರದಿ ಜಾರಿಗೆ ಅನುಷ್ಠಾನ ಸಮಿತಿಯನ್ನು ರಚಿಸಲಾಯಿತು. ಈ ವೇಳೆ ಸಮಿತಿ ಮರು ಟೆಂಡರ್ ಕರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಮರು ಟೆಂಡರ್ ಕರೆಯಲಾಯಿತು. ಇಷ್ಟೆಲ್ಲ ಮಾಡಿದ ನಂತರ ಸಮಿತಿಯಲ್ಲಿದ್ದ ಒಂದು ಎನ್‌ಜಿಓ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಕ್ಕೆ ಹೋಗಿದೆ. ಇವರು ನಿಜವಾಗಿಯೂ ಬೆಂಗಳೂರು ಪರವಾಗಿದ್ದಾರೆಯೇ ಎಂಬುದನ್ನು ಯೋಚಿಸಬೇಕಿದೆ ಎಂದು ತಿಳಿಸಿದರು. ಎಲ್ಲ ಕೆರೆಗಳನ್ನು ಡಿನೋಟಿಫೈ ಮಾಡುವಂತಹ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ. ಯಾವ ಕೆರೆ ಸಂಪೂರ್ಣವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದೆಯೋ, ಈಗಾಗಲೇ ಕೆಲವೊಂದು ಅಭಿವೃದ್ದಿ ಕೆಲಸಗಳು ನಡೆದಿರುವ ಕೆರೆಗಳನ್ನು ಮಾತ್ರ ಡಿನೋಟಿಫೈ ಮಾಡುವ ಕುರಿತ ಚರ್ಚೆ ನಡೆಯುತ್ತಿದ್ದು, ಯಾವುದೇ ತೀರ್ಮಾನ ಆಗಿಲ್ಲ.
-ಕೆ.ಜೆ.ಜಾರ್ಜ್, ಸಚಿವ