Advertisement

ಡಿಕೆಶಿ ವಿರುದ್ಧ ರಾಜಕೀಯ ಪ್ರೇರಿತ ನೋಟಿಸ್‌:ದಿನೇಶ್‌

06:50 AM Nov 17, 2018 | Team Udayavani |

ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ರಾಜಕೀಯ ಪ್ರೇರಿತವಾಗಿ ನೋಟಿಸ್‌ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಶಕ್ತಿ ಯೋಜನೆಯ ಪ್ರಗತಿ ಹಾಗೂ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಮೈಸೂರು ವಿಭಾಗದ
ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಡಿ.ಕೆ.ಶಿವಕುಮಾರ್‌ರನ್ನು ಗುರಿಯಾಗಿಸಿದೆ. ಪ್ರಧಾನಿ ಮೋದಿ, ಅಮಿತ್‌ ಶಾ ತಂತ್ರದಿಂದ ಈ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.

ಡಿ.ಕೆ.ಶಿವಕುಮಾರ್‌ ಅವರಿಗೆ ಇಡಿ ನೋಟಿಸ್‌ ನೀಡಿದರೆ ಅವರು ಅದಕ್ಕೆ ಕಾನೂನು ಪ್ರಕಾರ ಮುಂದುವರಿಯುತ್ತಾರೆ. ಅದಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ. ವಿಧಾನಸೌಧದಲ್ಲಿ ಆ ಬಗ್ಗೆ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ.
– ಎಚ್‌.ಡಿ.ಕುಮಾರಸ್ವಾಮಿ, ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next