Advertisement

ರಾಜಕೀಯ ಪ್ರೇರಿತ ಮುಂಗಡ ಪತ್ರ

11:57 AM Jul 06, 2018 | |

ಬೆಂಗಳೂರು: ಸಮಗ್ರ ಕರ್ನಾಟಕ ಕಾಳಜಿ ಇಲ್ಲದೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಜೆಡಿಎಸ್‌ ಬೆಂಬಲಿತ ಜಿಲ್ಲೆಗಳಿಗೆ ಮುತುವರ್ಜಿ ವಹಿಸಿ ರಾಜಕೀಯ ಪ್ರೇರಿತ ಬಜೆಟ್‌ ಮಂಡಿಸಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌ ಟೀಕಿಸಿದ್ದಾರೆ.

Advertisement

ವಿದ್ಯುತ್‌ ದರ ಪ್ರತಿ ಯೂನಿಟ್‌ಗೆ 20 ಪೈಸೆಯಂತೆ ಹೆಚ್ಚಿಸಲಾಗಿದೆ. ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ಹೆಚ್ಚಳ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಬರೆ ಎಳೆದಿದ್ದಾರೆ. ರೈತರ ಸಾಲ ಮನ್ನಾದ ಬಗ್ಗೆ ಪ್ರಸ್ತಾಪಿಸಿ, ರೈತರ ಕಣ್ಣೊರೆಸುವ ತಂತ್ರ ಅನುಸರಿಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 53 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿಲ್ಲ. ನೇಕಾರರ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮತ್ತು ಮೀನುಗಾರರ ಸಾಲ ಮನ್ನಾ ಮಾಡುವ ಭರವಸೆ ಈಡೇರಿಸಿಲ್ಲ ಎಂದು ದೂರಿದರು.

ಸಣ್ಣ ಟ್ರ್ಯಾಕ್ಟರ್‌ಗಳ ಖರೀದಿಗೆ ಶೇ.75 ಮತ್ತು ಇನ್ನಿತರೆ ಸಲಕರಣೆಗಳ ಖರೀದಿಗೆ ಶೇ.90 ಸಬ್ಸಿಡಿ ನೀಡುತ್ತೇವೆ ಎಂದಿದ್ದ ಮುಖ್ಯಮಂತ್ರಿಗಳು  ಮಾತು ತಪ್ಪಿದ್ದಾರೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ 5 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡುವುದಾಗಿ ಹೇಳಿದ್ದು ಹಾಗೇ ಉಳಿದುಕೊಂಡಿದೆ. ಲೋಕಾಯುಕ್ತ ಬಲವರ್ಧನೆ ಮಾಡಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next