Advertisement

ಶ್ರೀನಗರದಲ್ಲಿ ಉದ್ವಿಗ್ನ ಪರಿಸ್ಥಿತಿ, ಕರ್ಫ್ಯೂ ಜಾರಿ; ಪ್ರತಿಭಟನೆ, ಓರ್ವ ಬಲಿ, 6ಮಂದಿಗೆ ಗಾಯ

08:51 AM Aug 08, 2019 | Nagendra Trasi |

ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 35ಎ ಕಲಂ ಅನ್ನು ರದ್ದುಗೊಳಿಸಿದ ಬಳಿಕ ತಣ್ಣಗಿದ್ದ ಜಮ್ಮುಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.

Advertisement

ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ ಪ್ರಮುಖ ರಾಜಕೀಯ ಮುಖಂಡರನ್ನು ಬಂಧಿಸಲಾಗಿದೆ. ಕೆಲವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟಿಸುತ್ತಿದ್ದ ಯುವಕನೊಬ್ಬನ ಬೆನ್ನಟ್ಟಿ ಹೋದಾಗ ಆತ ಝೇಲಂ ನದಿಗೆ ಹಾರಿದ್ದು, ಬಳಿಕ ಆತ ಸಾವನ್ನಪ್ಪಿರುವುದಾಗಿ ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ನಿರತರಾಗಿದ್ದವರ ಮೇಲೆ ಗುಂಡು ಹಾರಿಸಿದ ಪರಿಣಾಮ ಆರು ಮಂದಿಯನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್ ಪಿ ನ್ಯೂಸ್ ವರದಿ ಮಾಡಿದೆ. ಕಾಶ್ಮೀರ ಕಣಿವೆಯಲ್ಲಿ ಇಂಟರ್ನೆಟ್ ಸೇರಿದಂತೆ ಬಹುತೇಕ ಸೇವೆಗಳನ್ನು ಬಂದ್ ಮಾಡಲಾಗಿದೆ.

ನೂತನವಾಗಿ ಅಸ್ತಿತ್ವಕ್ಕೆ ಬಂದ ಜಮ್ಮು-ಕಾಶ್ಮೀರ ಕೇಂದ್ರಾಡಳಿ ಪ್ರದೇಶಕ್ಕೆ ಮತ್ತು ಲಡಾಖ್ ಗೆ ಇಂದು ನೂತನ ಲೆಫ್ಟಿನೆಂಟ್ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next