Advertisement

ಅಂತಾರಾಷ್ಟ್ರೀಯ ಯೋಗ ದಿನ: ರಾಜ್ಯಪಾಲರು, ಮಾಜಿ ಪ್ರಧಾನಿಗಳ ಯೋಗಾಭ್ಯಾಸ

05:27 PM Jun 21, 2020 | keerthan |

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ರಾಜ್ಯದ ಪ್ರಮುಖರು ಯೋಗಾಭ್ಯಾಸದಲ್ಲಿ ತೊಡಗದರು. ರಾಜ್ಯಪಾಲ ವಜುಭಾಯಿ ವಾಲಾ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಯೋಗಾಭ್ಯಾಸದಲ್ಲಿ ತೊಡಗಿದರು.

Advertisement

ರಾಜ್ಯಪಾಲ ವಜುಭಾಯಿ ವಾಲಾ ಅವರು, ಆರನೇ ಅಂತಾರಾಷ್ಟ್ರೀಯ ಯೋಗದಿನದ ಪ್ರಯುಕ್ತ ಇಂದು ಬೆಳಿಗ್ಗೆ ಆರು ಗಂಟೆಗೆ ರಾಜಭವನದಲ್ಲಿ ಯೋಗಾಭ್ಯಾಸ ನಡೆಸಿದರು.  ಯೋಗದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು. ಅಲ್ಲದೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉತ್ತಮ ಎಂದು ರಾಜ್ಯಪಾಲರು ಹೇಳಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಪದ್ಮನಾಭ ನಗರದ ನಿವಾಸದಲ್ಲಿ ಯೋಗಾಭ್ಯಾಸ ನಡೆಸಿದರು.

Advertisement

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿ ಅರುಣ್ ಕುಮಾರ್, ವಿಧಾನಪರಿಷತ್ ಸದಸ್ಯರು ಹಾಗೂ  ರಾಜ್ಯ ಪ್ರಧಾನಕಾರ್ಯ ಎನ್. ರವಿಕುಮಾರ್ , ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಮತ್ತು ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ತಮ್ಮ ನಿವಾಸದಲ್ಲಿ ಯೋಗಾಸನ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next