Advertisement
ರಾಜ್ಯದ ಪ್ರಮುಖ ರಾಜಕೀಯ ನಾಯಕರು ಡಿಕೆಶಿ ಬಂಧನದ ಕುರಿತು ನೀಡಿದ ಹೆಳಿಕೆಗಳು ಇಲ್ಲಿವೆ:ಕೇಂದ್ರ ಸರಕಾರದ ಏಜೆನ್ಸಿಗಳನ್ನು ಛೂ ಬಿಟ್ಟು ವಿರೋಧ ಪಕ್ಷದ ನಾಯಕರನ್ನು ಸತತವಾಗಿ ಗುರಿ ಮಾಡಲಾಗುತ್ತಿದೆ. ಇದು ಬಿಜೆಪಿ ಸರಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ದೇಶದ ಜನರ ದಾರಿ ತಪ್ಪಿಸಲು ಮೋದಿ ಸರಕಾರ ಮಾಡುತ್ತಿರುವ ವ್ಯರ್ಥಪ್ರಯತ್ನವಾಗಿದೆ. ಡಿಕೆ ಶಿವಕುಮಾರ್ ಅವರು ನಿರ್ದೋಷಿಯಾಗಿ ಹೊರಬರಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಹಾಗೂ ಈ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಡಿ ಕೆ ಶಿವಕುಮಾರ್ ಅವರ ಜೊತೆಗಿದ್ದೇವೆ ಎಂದು ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಣಿ ಟ್ವೀಟ್ ಗಳ ಮೂಲಕ ತಿಳಿಸಿದ್ದಾರೆ.
ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ.@INCKarnataka
ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಸಂದರ್ಭದಲ್ಲಿ ಅದನ್ನು ಸರಿಪಡಿಸುವುದು ಬಿಟ್ಟು ಕೇಂದ್ರ ಸರಕಾರವು ವಿರೋಧ ಪಕ್ಷಗಳನ್ನು ಬೆದರಿಸುತ್ತಿರುವುದು ದುರದೃಷ್ಟಕರ ಎಂದು ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ಪ್ರಭಾವಿ ನಾಯಕ ಅಹಮ್ಮದ್ ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.
It is most unfortunate that when the economy is in doldrums the only priority of this government is intimidating the opposition
ವಿರೋಧ ಪಕ್ಷದ ನಾಯಕರ ತೇಜೋವಧೆ, ಬ್ಲ್ಯಾಕ್ ಮೇಲ್ ಮತ್ತು ಬೆದರಿಸುವ ದುರುದ್ದೇಶದಿಂದ ಮೋದಿ ಸರಕಾರ ಇಂತಹ ರಾಜಕೀಯ ಪ್ರೇರಿತ ದಾಳಿಗಳನ್ನು ನಡೆಸುತ್ತಿದೆ. ನಾವು ಡಿ ಕೆ ಶಿವಕುಮಾರ್ ಅವರ ಜೊತೆಗಿದ್ದೇವೆ ಮತ್ತು ಬಿಜೆಪಿಯ ಈ ಹಿಟ್ಲರ್ ರಾಜ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿಕೆಶಿ ಬಂಧನಕ್ಕೆ ಪ್ರತಿಕ್ರಿಯಿಸಿದ್ದಾರೆ.
With an intention to defame, blackmail and threaten, the Modi govt has launched this politically motivated attack on their opponents.
Related Articles
ಶಿವಕುಮಾರ್ ಅವರನ್ನು ಬಂಧಿಸಿರುವುದು ನೂರು ಪ್ರತಿಶತ ರಾಜಕೀಯ ದುರುದ್ದೇಶದಿಂದ ಕೂಡಿದ್ದು ಎಂದು ಮಾಜೀ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ. ಮಾತ್ರವಲ್ಲದೇ ಕೇಂದ್ರ ಸರಕಾರ ಇಡಿ, ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ಸರಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಮಲಿಂಗ ರೆಡ್ಡಿ ಅವರು ಆರೋಪಿಸಿದ್ದಾರೆ.
Advertisement
ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಗಾಡ್ ಫಾದರ್ ಡಿ ಕೆ ಶಿವಕುಮಾರ್ ಅವರ ಬಂಧನಕ್ಕೆ ಪ್ರತಿಕ್ರಿಯಿಸಿದ್ದು ಹೀಗೆ.
ಪಕ್ಷದ ನಿಷ್ಠಾವಂತ ವ್ಯಕ್ತಿ ಸನ್ಮಾನ್ಯ ಶ್ರೀ @DKShivakumar ಜೀ ಅವರ ಬಂಧನ ಅತ್ಯಂತ ಖಂಡನೀಯವಾದದ್ದು, ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರು ಧೈರ್ಯವನ್ನು ಕಳೆದುಕೊಳ್ಳಬೇಡಿ, ಇವತ್ತು ಲಕ್ಷಾಂತರ ಕಾರ್ಯಕರ್ತರನ್ನು ಬೆಳೆಸಿದ ಅವರು ಆದಷ್ಟೂ ಬೇಗ ಹೊರಗಡೆ ಬರ್ತಾರೆ ಅಂತಾ ಹೇಳ್ತಾ ನಾವೆಲ್ಲರೂ ಅವರ ಬೆಂಬಲಕ್ಕೆ ಒಗ್ಗಟ್ಟಾಗಿ ಸದಾಸಿದ್ದರಾಗಿರೋಣಾ pic.twitter.com/qx1dyitU4M
ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜೀ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ, ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.