ಪಣಜಿ: ಕಳೆದ ಹಲವು ತಿಂಗಳಿಂದ ಗೋವಾ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಹಿಂದು ಮುಂದು ನೋಡುತ್ತಿದ್ದರು. ಆದರೆ ಸದ್ಯ ಗೋವಾಕ್ಕೆ ಆಗಮಿಸಿರುವ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಸ್ಥಳೀಯ ಪಕ್ಷಗೊಂದಿಗೆ ಮೈತ್ರಿ ಮಾಡಿಕೊಳ್ಳುವ ಸೂಚನೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೇಸ್ ಹಾಗೂ ಇತರ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ವಿಷಯವು ಭಾರಿ ಚರ್ಚೆಗೆ ಕಾರಣವಾಗಿದೆ.
ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರೀಕರ್ ರವರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಆವೆರ್ತಾನೊ ಫುರ್ತಾದೊ ರವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.
ಇದನ್ನೂ ಓದಿ:ಗುಲಾಬ್ ಅಬ್ಬರ: ಮಹಾ ಮಳೆಗೆ 25ಕ್ಕೂ ಹೆಚ್ಚು ಮಂದಿ ಬಲಿ
ಪಣಜಿಯ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಮಾತನಾಡಿ- ನಾವು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ವಿಶ್ವಾಸಾರ್ಹ ಉಮೇದುವಾರರನ್ನು ಕಣಕ್ಕಿಳಿಸಲಿದ್ದೇವೆ. ರಾಷ್ಟ್ರವಾಧಿ ಕಾಂಗ್ರೆಸ್ ಹಾಗೂ ಗೋವಾ ಫೊರ್‍ವರ್ಡ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಫರ್ಧಿಸಲು ನಾವು ಸಿದ್ಧರಿದ್ದೇವೆ ಎಂದು ಗುಂಡೂರಾವ್ ನುಡಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೆಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್ ಮತ್ತಿತರರು ಉಪಸ್ಥಿತರಿದ್ದರು.