Advertisement
ಈಗಾಗಲೇ ಜೆಡಿಎಸ್ ಏಳು ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಕಾಂಗ್ರೆಸ್ ಕೇವಲ ಮೂರು ಕ್ಷೇತ್ರಗಳಿಗೆ ಹುರಿಯಾಳುಗಳ ಪಟ್ಟಿ ಬಿಡುಗಡೆ ಮಾಡಿದೆ. ಇನ್ನುಳಿದಂತೆ ನಾಲ್ಕು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಇದರ ಜೊತೆಗೆ ಬಿಜೆಪಿ, ಎಎಪಿ, ಬಿಎಸ್‌ಪಿ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಮುಳುಗಿವೆ.
Related Articles
Advertisement
ಅಳೆದು ತೂಗುತ್ತಿರುವ ಬಿಜೆಪಿ: ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ನಿರೀಕ್ಷೆ ಯಲ್ಲಿರುವ ಕಮಲ ಪಾಳೆಯ ಅಭ್ಯರ್ಥಿಗಳ ಆಯ್ಕೆಗೆ ಮಾಡಲು ಅಳೆದು ತೂಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಿಲ್ಲೆಗೆ ಭೇಟಿ ನೀಡಿ, ಪಕ್ಷದ ಹುಮ್ಮಸ್ಸು ಹೆಚ್ಚಿಸಿರುವು ದರಿಂದ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ. ಅಲ್ಲದೆ, ಬಿಜೆಪಿ ನಾಮಪತ್ರ ಸಲ್ಲಿಕೆಗೆ ಕಡೇ ದಿನಾಂಕಕ್ಕೆ ಮೂರ್‍ನಾಲ್ಕು ದಿನಗಳಿರುವಾಗ ಟಿಕೆಟ್ ಘೋಷಣೆ ಮಾಡುವುದು ಸಾಮಾನ್ಯವಾಗಿದೆ. ಅದರಂತೆ ಈ ಬಾರಿ ಯೂ ಕುತೂಹಲ, ನಿರೀಕ್ಷೆ ಹೆಚ್ಚಿಸಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಿದೆಯೇ ಕಾದು ನೋಡಬೇಕು.
ಸಂಭಾವ್ಯ ಅಭ್ಯರ್ಥಿಗಳಿಗೆ ಸಿಗಲಿದೆಯೇ ಟಿಕೆಟ್ : ಈಗಾಗಲೇ ಜಿಲ್ಲೆಯಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಾಗಿ ಗುರುತಿಸಿಕೊಂಡಿರುವವರಿಗೆ ಟಿಕೆಟ್ ಸಿಗಲಿದೆಯೇ ಎಂಬ ಕುತೂಹಲ ಹೆಚ್ಚಿಸಿದೆ. ಮಂಡ್ಯ ಕ್ಷೇತ್ರದಿಂದ ಅಶೋಕ್ ಜಯರಾಂ, ಮದ್ದೂರಿನಿಂದ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಮಳವಳ್ಳಿಯಿಂದ ಬಿ.ಮುನಿರಾಜು, ಶ್ರೀರಂಗಪಟ್ಟಣದಿಂದ ಇಂಡುವಾಳು ಎಸ್. ಸಚ್ಚಿದಾನಂದ, ಮೇಲುಕೋಟೆಯಿಂದ ಡಾ.ಇಂದ್ರೇಶ್, ಕೆ.ಆರ್.ಪೇಟೆ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ನಾಗಮಂಗಲದಿಂದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅಥವಾ ಫೈಟರ್ ರವಿಗೆ ಟಿಕೆಟ್ ಸಿಗುವ ನಿರೀಕ್ಷೆಯಿದೆ.
ಹೆಚ್ಚಿದ ಪಕ್ಷಾಂತರ ಪರ್ವ : ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಾಂತರ ಪರ್ವ ಹೆಚ್ಚಿದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಹಾರುವ ಚಟುವಟಿಕೆಗಳು ಬಿರುಸುಗೊಂಡಿವೆ. ಶ್ರೀರಂಗಪಟ್ಟಣ, ಮೇಲುಕೋಟೆ, ಮದ್ದೂರು, ಕೆ.ಆರ್.ಪೇಟೆ, ಮಳವಳ್ಳಿಯಲ್ಲಿ ಮೂರು ಪಕ್ಷಗಳ ಕಾರ್ಯಕರ್ತರು ಬೇರೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ. ಅಲ್ಲದೆ, ಅಭ್ಯರ್ಥಿಗಳು, ಆಕಾಂಕ್ಷಿತರು ಬೇರೆ ಪಕ್ಷಗಳ ಕಾರ್ಯಕರ್ತರ ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ.
– ಎಚ್.ಶಿವರಾಜು