Advertisement
ಉಪ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದಿದ್ದರೆ ಸರಕಾರಕ್ಕೆ ಆತಂಕ ಎದುರಾಗಲಿದೆ. ಅಂತಹ ಸನ್ನಿವೇಶದಲ್ಲಿ ಸರಕಾರ ಉಳಿಸಿಕೊಳ್ಳಲು ಬಿಜೆಪಿಗೂ ಜೆಡಿಎಸ್ ಅನಿವಾರ್ಯ ವಾಗುತ್ತದೆ. ಮತ್ತೂಂದೆಡೆ ಮಹಾರಾಷ್ಟ್ರ ಬೆಳವಣಿಗೆಗಳಿಂದ ಉತ್ತೇಜಿತವಾಗಿರುವ ಕಾಂಗ್ರೆಸ್ ಕೂಡ ಮತ್ತೂಮ್ಮೆ ಮೈತ್ರಿಗೆ ಮುಂದಾಗಬಹುದು. ಇದರ ಆಧಾರದಲ್ಲಿಯೇ ಕುಮಾರಸ್ವಾಮಿ ಮತ್ತು ದೇವೇಗೌಡರು ಪ್ರಚಾರ ಸಭೆಗಳಲ್ಲಿ ಮಾತನಾಡುತ್ತಿದ್ದಾರೆ ಎನ್ನಲಾಗಿದೆ.
Related Articles
Advertisement
ಇದೇ ಕಾರಣಕ್ಕೆ 15 ಕ್ಷೇತ್ರಗಳ ಪೈಕಿ ಕೆಲವೆಡೆ ಕಾಂಗ್ರೆಸ್-ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ. ಎರಡೂ ಪಕ್ಷದ ನಾಯಕರು ಬಿಜೆಪಿ ಗೆಲ್ಲದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
ಯಶವಂತಪುರ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್. ಪೇಟೆ ಕ್ಷೇತ್ರಗಳ ಬಗ್ಗೆ ಜೆಡಿಎಸ್ ವಿಶ್ವಾಸ ಹೊಂದಿದೆ. ಕಾಂಗ್ರೆಸ್ ಕೂಡ ಶಿವಾಜಿನಗರ, ಕಾಗವಾಡ, ಗೋಕಾಕ್, ಹಿರೇಕೆರೂರು, ರಾಣೆಬೆನ್ನೂರು ಕ್ಷೇತ್ರಗಳ ಬಗ್ಗೆ ಭರವಸೆಯಲ್ಲಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಶ್ರಮ ಹಾಕಿದರೆ ಬಿಜೆಪಿ ಗೆಲುವು ತಡೆಗಟ್ಟಬಹುದು. ಕೆ.ಆರ್. ಪುರ, ಮಹಾಲಕ್ಷ್ಮೀ ಲೇ ಔಟ್, ಅಥಣಿ, ವಿಜಯನಗರ ಕ್ಷೇತ್ರಗಳು ಮಾತ್ರ ಬಿಜೆಪಿಗೆ ಸುಲಭದ ಹಾದಿ ಎಂಬುದು ಎರಡೂ ಪಕ್ಷಗಳ ಅಭಿಪ್ರಾಯ ಎನ್ನಲಾಗುತ್ತಿದೆ.
ಕಣ್ಣೀರಿಟ್ಟ ಎಚ್ಡಿಕೆಮಂಡ್ಯ/ಕಿಕ್ಕೇರಿ: ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸೋಲು, ನಾರಾಯಣ ಗೌಡರು ಮಾಡಿದ ಮೋಸ ನೆನೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿಯ ಸಂತೆಮಾಳದಲ್ಲಿ ನಡೆದ ಜೆಡಿಎಸ್ ಅಭ್ಯರ್ಥಿ ಬಿ.ಎಲ್. ದೇವರಾಜು ಪರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ನನಗೆ ಪುತ್ರನನ್ನು ರಾಜಕೀಯಕ್ಕೆ ಕರೆತರಲು ಇಷ್ಟವಿರಲಿಲ್ಲ. ಜಿಲ್ಲೆಯ ಶಾಸಕರ ಒತ್ತಾಯದ ಮೇಲೆ ಅವನನ್ನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಮಾಡಿದೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡಿಕೊಂಡು ನನ್ನ ವಿರುದ್ಧ ಅಪಪ್ರಚಾರಗೈದರು ಎಂದರು.