Advertisement
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ತಾಲೂಕಿನಲ್ಲಿ 250 ರಿಂದ 300 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಯಾವುದೇ ಅಧಿಕಾರಿಯಿಂದ ಒಂದು ರೂಪಾಯಿ ಪಡೆದುಕೊಂಡಿಲ್ಲ ಎಂದು ಹೇಳಿದರು.
Related Articles
Advertisement
ಚಳಿಗಾಲದ ಅಧಿವೇಶನದಲ್ಲಿ ಸಹಕಾರ ಸಾರಿಗೆ ವಿಷಯ ಪ್ರಸ್ತಾಪಿಸಲು ನಿರ್ಧರಿಸಿದ್ದು, ಶೂನ್ಯವೇಳೆಯಲ್ಲೂ ಅವಕಾಶ ಪಡೆಯಲು ಸಾಧ್ಯವಾಗಿಲ್ಲ. ಕಡಿಮೆ ಬಡ್ಡಿದರದಲ್ಲಿ ಸರ್ಕಾರದಿಂದ ಸಾಲ ಕೊಡಿಸಲು ಹಿಂದಿನ ಸರ್ಕಾರದ ಅವಧಿಯಲ್ಲಿ ಸಹಕಾರ ಸಚಿವರು ಪ್ರಯತ್ನಿಸಿದ್ದರೂ ಅದು ಸಾಧ್ಯವಾಗಲಿಲ್ಲ ಎಂದ ಅವರು, ಸಂಸ್ಥೆ ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಕೊಪ್ಪದ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಕಾರ್ಫ್ ಮತ್ತು ಕೇಸರಿ ಶಲ್ಯ ವಿವಾದವನ್ನು ಪೋಷಕರ ಸಭೆಯಲ್ಲಿ ಸರಿಪಡಿಸಲಾಗಿದೆ. ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿರುವುದರಿಂದ ಅದನ್ನು ಪಾಲಿಸುವುದು ಸೂಕ್ತವೆಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಪೋಷಕರು ಸಮ್ಮತಿಸಿದ್ದಾರೆ. ಇದನ್ನು ಮೀರಿ ನಡೆದರೆ ಬೇರೆ ಕಾಲೇಜಿಗೆ ವರ್ಗಾವಣೆ ಪತ್ರ ನೀಡಲಾಗುವುದು ಎಂದು ಎಚ್ಚರಿಸಿದರು.
ಭಾವನಾತ್ಮಕ ಸಂಪ್ರದಾಯಗಳನ್ನು ಬಿಡಿ ಎಂದು ಹೇಳಲಾಗದು. ಯಾವುದೇ ಸಮುದಾಯದ ಸಂಪ್ರದಾಯದ ಬಗ್ಗೆ ಪ್ರಶ್ನೆ ಮಾಡುವುದು ಸರಿಯಲ್ಲ. ಯಾವುದೇ ವಿದ್ಯಾರ್ಥಿಗಳು ನಾವು ಭಾರತಾಂಬೆಯ ಮಕ್ಕಳು ಎಂಬ ಭಾವನೆ ಹೊಂದಿರಬೇಕೆಂದು ತಿಳಿ ಹೇಳಲಾಗಿದೆ. ಯಾರದೋ ಪ್ರಚೋದನೆಯಿಂದ ಕೆಲವರು ಕಾಲೇಜಿಗೆ ಬಂದು ಕಾಲೇಜಿನ ನಿಯಮ ಉಲ್ಲಂಘಿಸಿದರೆ ಕಾಲೇಜಿನಿಂದ ಹೊರಗೆ ಕಳುಹಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದರು.
ಚುನಾವಣೆಗಳು ಹತ್ತಿರ ಬರುತ್ತಿವೆ ಎನ್ನುವಾಗ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೌಹಾರ್ದ ವಾತಾವರಣವನ್ನು ಕೆಡಿಸಲಾಗುತ್ತಿದೆ. ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯಕ್ಕೆ ಅವಕಾಶ ಇರಬಾರದು. ಹೊರಗಡೆಯಿಂದ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಲಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಕಾಣದ ಕೈಗಳು ಕೆಲಸ ಮಾಡುತ್ತಿದ್ದರೆ, ಮಟ್ಟ ಹಾಕಬೇಕಾಗುತ್ತದೆ ಎಂದು ಹೇಳಿದರು.